ನವದೆಹಲಿ: ಗೋವು ಕಳ್ಳಸಾಗಣೆ ಪ್ರಕರಣದಲ್ಲಿ ಸಿಬಿಐ ಗುರುವಾರ(ಆಗಸ್ಟ್ 11) ಬೆಳಗ್ಗೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಅನುಬ್ರತಾ ಮಂಡಲ್ ಅವರನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಜಂಬೂ ಸವಾರಿ ಆನೆಗಳ ತೂಕ ಪರೀಕ್ಷೆ: ಮಾಜಿ ಕ್ಯಾಪ್ಟನ್ ಅರ್ಜುನನೇ ಫಿಟ್
ಇಂದು ಬೆಳಗ್ಗೆ ಏಕಾಏಕಿ ಸಿಬಿಐ ಅಧಿಕಾರಿಗಳು ಅನುಬ್ರತಾ ಮಂಡಲ್ ಮನೆ ಮೇಲೆ ದಾಳಿ ನಡೆಸಿದ್ದು, ಮನೆಯ ಎಲ್ಲಾ ಬಾಗಲುಗಳನ್ನು ಒಳಗಿನಿಂದ ಲಾಕ್ ಮಾಡಿದ್ದರು. ಅಷ್ಟೇ ಅಲ್ಲ ಮನೆಯಲ್ಲಿದ್ದವರ ಎಲ್ಲಾ ಮೊಬೈಲ್ ಫೋನ್ ಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ವಿವರಿಸಿದೆ.
ಸಿಬಿಐ ಮೂಲಗಳ ಪ್ರಕಾರ, ಗೋವು ಕಳ್ಳಸಾಗಣೆ ಪ್ರಕರಣದ ವಿಚಾರಣೆಯಲ್ಲಿ ಸಹಕರಿಸದಿದ್ದ ಪರಿಣಾಮ ಬಂಧಿಸಲಾಗಿದೆ ಎಂದು ತಿಳಿಸಿದೆ. ಸಿಬಿಐ ಹತ್ತು ಬಾರಿ ಸಮನ್ಸ್ ನೀಡಿದ್ದು, ಕೇವಲ ಒಂದು ಬಾರಿ ಮಾತ್ರ ಅನುಬ್ರತಾ ವಿಚಾರಣೆಗೆ ಹಾಜರಾಗಿದ್ದರು. ಬುಧವಾರವೂ ತನಿಖೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ ಗೈರು ಹಾಜರಾಗಿದ್ದು, ಇಂದು ಬೆಳಗ್ಗೆ ತೃಣಮೂಲ ಕಾಂಗ್ರೆಸ್ ಬಿರ್ಮ್ಯೂಮ್ ಜಿಲ್ಲಾಧ್ಯಕ್ಷ ಮಂಡಲ್ ನಿವಾಸದ ಮೇಲೆ ದಾಳಿ ನಡೆಸಿ, ಬಂಧಿಸಲಾಗಿದೆ.
ಮಂಡಲ್ ನಿವಾಸದ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಮನೆಯ ಸುತ್ತಲೂ ಸಿಆರ್ ಪಿಎಫ್ ಯೋಧರನ್ನು ನಿಯೋಜಿಸಲಾಗಿತ್ತು. ಸುಮಾರು 10-12 ಬೆಂಗಾವಲು ಪಡೆ ವಾಹನದ ಜತೆ ಸಿಬಿಐ ಅಧಿಕಾರಿಗಳು ಆಗಮಿಸಿದ್ದರು ಎಂದು ವರದಿ ತಿಳಿಸಿದೆ.