Advertisement

CBI; 20 ಲಕ್ಷ ಲಂಚ ಪ್ರಕರಣದಲ್ಲಿ ಎನ್‌ಎಚ್‌ಎಐ ಪ್ರಧಾನ ವ್ಯವಸ್ಥಾಪಕ ಬಂಧನ

04:24 PM Mar 03, 2024 | Team Udayavani |

ಮುಂಬೈ: ಮಹಾರಾಷ್ಟ್ರದ ನಾಗ್ಪುರದಲ್ಲಿ 20 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಜನರಲ್ ಮ್ಯಾನೇಜರ್ ಅನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

Advertisement

ಯೋಜನಾ ನಿರ್ದೇಶಕರೂ ಆಗಿರುವ ಅರವಿಂದ ಕಾಳೆ ಅವರು ಖಾಸಗಿ ಕಂಪನಿಯಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಕಾಳೆ ಬಂಧನದ ನಂತರ ಶೋಧ ಕಾರ್ಯಾಚರಣೆಯಲ್ಲಿ 20 ಲಕ್ಷ ರೂಪಾಯಿ ಲಂಚ ಸೇರಿದಂತೆ 45 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದು, ಕಾಳೆ ಮತ್ತು ಖಾಸಗಿ ಕಂಪನಿ ಸೇರಿದಂತೆ 11 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಿಬಿಐ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next