Advertisement

ಯೋಗೀಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ, ಸಹೋದರ ವಿಜಯ್ ಸಿಬಿಐ ವಶಕ್ಕೆ

11:50 AM Nov 05, 2020 | keerthan |

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಸಹೋದರ ವಿಜಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು  ಗುರುವಾರ ವಶಕ್ಕೆ ಪಡೆದಿದ್ದಾರೆ.

Advertisement

2016 ಜೂ.15 ರಂದು ತಮ್ಮದೇ ಮಾಲೀಕತ್ವದ ಉದಯ ಜಿಮ್ ನಲ್ಲಿ ಹತ್ಯೆಯಾಗಿದ್ದ ಹುಬ್ಬಳ್ಳಿ ಜಿ.ಪಂ. ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಬಿಐ ಅಧಿಕಾರಿಗಳು, ಗುರುವಾರ ಬೆಳಿಗ್ಗೆ ಮಾಜಿ ಸಚಿವರ ಮನೆಗೆ ಭೇಟಿ ನೀಡಿ ಸಹೋದರಿಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಮನೆಯಿಂದ ಉಪನಗರ ಠಾಣೆಗೆ ಕರೆ ತಂದು‌ ವಿಚಾರಣೆ ನಡೆಸಲಾಗುತ್ತಿದ್ದು, ಇದು ಕಾಂಗ್ರೆಸ್ ವಲಯದಲ್ಲಿ ಭಾರೀ ಸಂಚಲನ‌ ಮೂಡಿಸಿದೆ.

ಯೋಗೀಶ್ ಗೌಡ ಈ ಹತ್ಯೆಯ ಮರುದಿನವೇ ಬಸವರಾಜ ಮುತ್ತಗಿ‌ ಒಳಗೊಂಡ ತಂಡವನ್ನು ಪೊಲೀಸರು ಬಂಧಿಸಿದ್ದರು. ಆದರೆ ಯೋಗೀಶ್ ಗೌಡ ಕುಟುಂಬವು ಈ ಪ್ರಕರಣ ಸಿಬಿಐಗೆ ನೀಡಲು ಆಗ್ರಹಿಸಿತ್ತು.‌

ಇದನ್ನೂ ಓದಿ:ದೇಶದಲ್ಲೇ ಮೊದಲ ಬಾರಿಗೆ ಸರಕಾರದಿಂದ ಬೀಚ್‌ ದತ್ತು

ಕಳೆದ ಒಂದು ವರ್ಷದಿಂದ ಸಿಬಿಐ ಯೋಗೀಶ್ ಗೌಡ ಗೌಡರ ಕೊಲೆ ಪ್ರಕರಣದ ತನಿಖೆ ನಡೆಸುತ್ತಿತ್ತು. ಈ ಸಂಬಂಧ ನಿಜವಾದ ಸುಪಾರಿ ಹಂತಕರನ್ನೂ ಸಿಬಿಐ ಅಧಿಕಾರಿಗಳು ಬಂಧಿಸಿ ಕರೆತರುವಲ್ಲಿ ಯಶಸ್ವಿಯಾಗಿದ್ದರು.

Advertisement

ಈ ಹಿಂದೆ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿ ಅವರ ಸಹೋದರ ವಿಜಯ ಕುಲಕರ್ಣಿ ಅವರನ್ನೂ ವಿಚಾರಣೆ ನಡೆಸಿದ್ದರು. ಹಲವು ಅಧಿಕಾರಿಗಳು ಹಾಗೂ ಹಲವು ರಾಜಕೀಯ ಮುಖಂಡರನ್ನೂ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದರು.

ಕೊಲೆಗೆ ಸುಪಾರಿ ಕೊಟ್ಟವರ ಬಗ್ಗೆ ಸಿಬಿಐ ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿತ್ತು. ಇದೀಗ ಈ ಕೊಲೆ ಪ್ರಕರಣದ ಭಾಗಿಯಾಗಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತು ಸಹೋದರ ವಿಜಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಅವರನ್ನು ತಮ್ಮ ವಶಕ್ಕೆ ಪಡೆದು ಧಾರವಾಡದ ಉಪನಗರ ಠಾಣೆಗೆ ಹೆಚ್ಚಿನ ವಿಚಾರಣೆಗೆ ಕರೆತಂದಿದ್ದಾರೆ.

ಬೆಳ್ಳಂಬೆಳಿಗ್ಗೆ ಬಾರಾಕೊಟ್ರಿಯಲ್ಲಿರುವ ವಿನಯ್ ಅವರ ಮನೆಗೆ ತೆರಳಿದ ಸಿಬಿಐ ಅಧಿಕಾರಿಗಳು, ಅವರನ್ನು ಉಪನಗರ ಠಾಣೆಗೆ ಕರೆತಂದಿದ್ದಾರೆ. ವಿನಯ್ ಕುಲಕರ್ಣಿ ಅವರ ಹುಟ್ಟುಹಬ್ಬದ ಮುನ್ನಾ ದಿನವೇ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next