Advertisement

ಸಾಲ ವಂಚನೆ ಪ್ರಕರಣ : ಸಿಬಿಐನಿಂದ ಚಂದಾ ಕೊಚ್ಚಾರ್, ಪತಿ ದೀಪಕ್ ಕೊಚ್ಚಾರ್ ಬಂಧನ

10:35 PM Dec 23, 2022 | Team Udayavani |

ನವದೆಹಲಿ : ಐಸಿಐಸಿಐ ಬ್ಯಾಂಕ್ – ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ.

Advertisement

2012 ರಲ್ಲಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ತೈಲ ಮತ್ತು ಅನಿಲ ಪರಿಶೋಧನಾ ಕಂಪನಿಯಾದ ವಿಡಿಯೋಕಾನ್ ಗ್ರೂಪ್‌ಗೆ ಬ್ಯಾಂಕ್ ಮಂಜೂರು ಮಾಡಿದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಅವರನ್ನು ಭ್ರಷ್ಟಾಚಾರ ವಿರೋಧಿ ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕ್ರಿಮಿನಲ್ ಪಿತೂರಿ ಮತ್ತು ನಿಬಂಧನೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚಾರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನುಪವರ್ ರಿನ್ಯೂಬಲ್ಸ್, ಸುಪ್ರೀಮ್ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಭ್ರಷ್ಟಾಚಾರ ತಡೆ ಕಾಯ್ದೆ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next