Advertisement
ತಮ್ಮ ವಿರುದ್ಧದ ಸಿಬಿಐ ತನಿಖೆ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
Related Articles
ಅರ್ಜಿದಾರರಾದ ಡಿ.ಕೆ. ಶಿವಕುಮಾರ್ ಅವರ ಮಗಳಿಗೂ ನೋಟಿಸ್ ನೀಡಲಾಗಿದೆ ಎಂದು ಕೋರ್ಟ್‌ಗೆ ತಪು$³ ಮಾಹಿತಿ ನೀಡಿ ತನಿಖೆಗೆ ತಡೆಯಾಜ್ಞೆ ಪಡೆದುಕೊಳ್ಳಲಾಗಿದೆ. ಆದರೆ, ಅರ್ಜಿದಾರರಿಗಾಗಲೀ ಅವರ ಮಗಳಿಗಾಗಲೀ ಸಿಬಿಐ ಯಾವುದೇ ನೋಟಿಸ್ ನೀಡಿಲ್ಲ. ಅರ್ಜಿದಾರರ ಮಗಳು ಓದಿದ್ದ ಶಾಲೆ ಮತ್ತು ಕಾಲೇಜುಗಳಿಗಷ್ಟೇ ನೋಟಿಸ್ ನೀಡಲಾಗಿದ್ದು, ಅವರ ಶುಲ್ಕ ಯಾರು ಪಾವತಿಸಿದ್ದಾರೆ, ಎಷ್ಟು ಪಾವತಿಸಿದ್ದಾರೆ ಎಂಬ ಮಾಹಿತಿ ಕೇಳಲಾಗಿದೆ. ಹೀಗಿದ್ದರೂ, ಸುಳ್ಳು ಹೇಳಿ ಕೋರ್ಟ್‌ನಿಂದ ತಡೆಯಾಜ್ಞೆ ಪಡೆದುಕೊಂಡಿದ್ದಾರೆ ಎಂದು ಸಿಬಿಐ ಪರ ವಕೀಲ ಪ್ರಸನ್ನಕುಮಾರ್ ದೂರಿದರು.
Advertisement
ವರದಿ ಸಲ್ಲಿಕೆ:ಇದೇ ವೇಳೆ ನ್ಯಾಯಾಲಯದ ನಿರ್ದೇಶನದಂತೆ ತನಿಖೆಯ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಿಬಿಐ ಪರ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು. ಪ್ರಕರಣದಲ್ಲಿ ಏನೆಲ್ಲ ತನಿಖೆ ನಡೆಸಲಾಗಿದೆ ಎಂಬ ಬಗ್ಗೆ ಹಲವು ಮಹತ್ವದ ಮಾಹಿತಿಗಳು ವರದಿಯಲ್ಲಿದೆ. ಅದರ ಆಧಾರದಲ್ಲಿ ತನಿಖೆ ಪೂರ್ಣಗೊಳಿಸಬೇಕಿದೆ. ಆದರೆ, ನ್ಯಾಯಾಲಯದ ತಡೆಯಾಜ್ಞೆ ಇರುವುದರಿಂದ ತನಿಖೆಗೆ ಅಡ್ಡಿಯಾಗಿದೆ. ಆದ್ದರಿಂದ ಅರ್ಜಿದಾರರ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿ ಕಳೆದ ಫೆ.10ರಂದು ನೀಡಿರುವ ಮಧ್ಯಂತರ ಆದೇಶ ತೆರವುಗೊಳಿಸಬೇಕೆಂದು ಕೋರಿದರು. ಮುಚ್ಚಿದ ಲಕೋಟೆಯಲ್ಲಿ ನೀಡಲಾಗಿದ್ದ ತನಿಖಾ ಪ್ರಗತಿ ವರದಿಯನ್ನು ಪರಿಶೀಲಿಸಿದ ನ್ಯಾಯಪೀಠ ಅದನ್ನು ಸಿಬಿಐ ಪರ ವಕೀಲರಿಗೇ ಹಿಂದಿರುಗಿಸಿತು.