ಮಂಗಳೂರು: ವಿನಯ್ ಕುಲಕರ್ಣಿ ಅಪರಾಧಿ ಸ್ಥಾನದಲ್ಲಿದ್ದಾರೆ. ಹೀಗಾಗಿ ಅವರ ಬಂಧನ ಮಾಡಲಾಗಿದೆ. ಸಾಕ್ಷ್ಯಾಧಾರ ಸಿಕ್ಕಿರುವುದರಿಂದ ಸಿಬಿಐ ವಶಕ್ಕೆ ಪಡೆದಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿನಯ್ ಕುಲಕರ್ಣಿ ಬಂಧನದ ವಿಚಾರವಾಗಿ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯೋಗೇಶ್ ಗೌಡ ಕುಟುಂಬಕ್ಕೆ ಈಗಲಾದರೂ ನ್ಯಾಯ ಸಿಗಲಿ. ಸಿಬಿಐ ತನಿಖೆಯಿಂದ ಸತ್ಯಾಂಶ ಹೊರಬರಲಿದೆ. ವಿನಯ್ ಬಿಜೆಪಿ ಸೇರುತ್ತಾರೆ ಎನ್ನುವುದು ಸುಳ್ಳು ಎಂದು ತಿಳಿಸಿದ್ದಾರೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದ ವಿಚಾರವಾಗಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿಬಿಐಯಿಂದ ನಿಷ್ಪಕ್ಷಪಾತ ತನಿಖೆ ನಡೆಯಲಿ. ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ ಪಡೆದ ಕ್ರಮವನ್ನು ಸ್ವಾಗತಿಸುವುದಾಗಿ ತಿಳಿಸಿದರು.
ಇದನ್ನೂ ಓದಿ: ರಾಜ್ಯದಲ್ಲಿ ಲವ್ ಜಿಹಾದ್ ಕಡೆಗಾಣಿಸಲು ಕಠಿಣ ಕ್ರಮ: ಮಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ
ಸಿಬಿಐ ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರಬಂದರೆ ತುಂಬಾ ಸಂತೋಷವಾಗುತ್ತದೆ. ಒಂದು ಕಾಲದಲ್ಲಿ ಅಧಿಕಾರ, ಹಣ ಉಪಯೋಗಿಸಿ ಕೊಲೆ, ಸುಲಿಗೆಯಾಗುತ್ತಿತ್ತು. ಅದೇ ಸರ್ಕಾರ ಯಾವಾಗಲೂ ಇರುತ್ತೆ ಅಂತ ಹೇಳಲು ಆಗಲ್ಲ. ಯಾವುದೇ ಕಾರಣಕ್ಕೂ ವಿನಯ್ ಕುಲಕರ್ಣಿ ಯನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ವಿನಯ್ ಕುಲಕರ್ಣಿ ಬಂಧನದಲ್ಲಿ ಬಿಜೆಪಿ ಕೈವಾಡವಿಲ್ಲ. ಕಾನೂನು ತನ್ನ ಕ್ರಮಕೈಗೊಂಡಿದೆ. ಯೋಗಿಶ್ ಗೌಡ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ಆರಂಭ: ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬಿಎಸ್ ವೈ