ಬದಲು ಸಿಬಿಐಗೆ ವಹಿಸಬೇಕೆಂದು ಕೋರಲಾದ ಅರ್ಜಿಯ ಸಂಬಂಧ ಸುಪ್ರೀಂಕೋರ್ಟ್ ಪ್ರತಿವಾದಿಗಳಾದ ರಾಘವೇಶ್ವರ ಸ್ವಾಮೀಜಿ, ರಾಜ್ಯ ಸರ್ಕಾರ ಹಾಗೂ ಸಿಐಡಿಗೆ ನೋಟಿಸ್ ಜಾರಿ ಮಾಡಿದೆ.
Advertisement
ಯುವತಿಯೊಬ್ಬರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ, ರಾಘವೇಶ್ವರ ಭಾರತೀ ಶ್ರೀಗಳ ವಿರುದಟಛಿದ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಸಿಬಿಐ ತನಿಖೆ ಬಗ್ಗೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಆರು ವಾರಗಳಲ್ಲಿ ಉತ್ತರಿಸಲು ಆದೇಶಿಸಿದೆ. ಅರ್ಜಿದಾರರ ಪರ ನ್ಯಾಯಾಲಯದಲ್ಲಿ ವಾದಿಸಿದ ವಕೀಲರು ಸಿಐಡಿ ತನಿಖೆ ಬಗ್ಗೆ ತಮಗೆ ವಿಶ್ವಾಸವಿಲ್ಲ, ತನಿಖೆ ವಿಳಂಬವಾಗುತ್ತಿದೆ. ತಮ್ಮ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸಲು ಆದೇಶಿಸಬೇಕು ಎಂದು ಮನವಿ ಮಾಡಿದರು.