Advertisement
ಡಿ ಕೆ ಶಿವಕುಮಾರ್ ಅವರ ಸದಾಶಿವ ನಗರದ ಮನೆ ಸೇರಿದಂತೆ ಕನಕಪುರದಲ್ಲಿ ಕೂಡಾ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಡಿ ಕೆ ಶಿವಕುಮಾರ್ ಅವರ ಸಹೋದರ ಸಂಸದ ಡಿ ಕೆ ಸುರೇಶ್ ಅವರ ಮನೆಗೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿದೆ.
Related Articles
Advertisement
ಈ ಹಿಂದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ ಕೆ ಶಿವಕುಮಾರ್ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ನಂತರ ಅವರ ಬಂಧನವಾಗಿತ್ತು. ಸದ್ಯ ಡಿ ಕೆ ಶಿ ಜಾಮೀನು ಪಡೆದಿದ್ದು, ಇದೀಗ ಸಿಬಿಐ ದಾಳಿ ನಡೆದಿದ್ದು, ಕನಕಪುರ ಬಂಡೆಗೆ ಮತ್ತೊಂದು ಕಂಟಕ ಎದುರಾಗಿದೆ.