Advertisement

ಬೆಂಗಳೂರು ಸೇರಿ ವಿವಿಧೆಡೆ ಡಿಕೆಶಿ ಆಪ್ತರ ಮನೆಗಳ ಮೇಲೆ ಸಿಬಿಐ ದಾಳಿ

12:34 PM May 31, 2018 | |

ಬೆಂಗಳೂರು: ‘ನಮ್ಮ ಮೇಲೆ ಕೇಂದ್ರ ಸರ್ಕಾರ ಸಂಚು ಹೂಡಿದೆ,11 ಮಂದಿ ನಮ್ಮ ಆಪ್ತರ ಮನೆ ಮೇಲೆ ಸರ್ಚ್‌ ವಾರಂಟ್‌ ಹೊರಡಿಸಲಾಗಿದೆ’ ಎಂದು ಕಾಂಗ್ರೆಸ್‌ ನಾಯಕ ಡಿ.ಕೆ.ಶಿಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ಅವರು ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಶಾಕ್‌ ನೀಡಿದ್ದಾರೆ. 

Advertisement

ಡಿ.ಕೆ.ಶಿವಕುಮಾರ್‌ ಅವರ ಕೆಲ ವ್ಯವಹಾರದ ಪಾಲುದಾರರ ನಿವಾಸಗಳ ಮೇಲೆ ಮೇಲೆ ಸಿಬಿಐ ಅಧಿಕಾರಿಗಳು ಗುರುವಾರ  ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಕನಕಪುರ , ರಾಮನಗರ , ನೆಲಮಂಗಲದಲ್ಲಿ  ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕನಕಪುರ ತಾಲೂಕು ಕಚೇರಿಯ ಮೇಲೂ ದಾಳಿ ನಡೆಸಿದ್ದು, ಚುನಾವಣಾ ವಿಭಾಗದಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ. 

ನೆಲಮಂಗಲದ ಟಿ.ಬೇಗೂರಿನಲ್ಲಿರುವ ಡಿ.ಕೆ.ಶಿವಕುಮಾರ್‌ ಅವರ ಆಪ್ತ ಪದ್ಮನಾಭಯ್ಯ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದ್ದು, ದಾಳಿ ವೇಳೆ ಮನೆಯಲ್ಲಿ ಪದ್ಮನಾಭಯ್ಯ ಅವರ ತಂದೆ ಮಾತ್ರ ಇದ್ದರು ಎಂದು ತಿಳಿದುಬಂದಿದೆ. 

ಬುಧವಾರ ಸಿಬಿಐ 11 ಮಂದಿಯ ವಿರುದ್ಧ ಕೋರ್ಟ್‌ನಲ್ಲಿ ಸರ್ಚ್‌ ವಾರೆಂಟ್‌ ಪಡೆದಿರುವ ಬಗ್ಗೆ ವರದಿಯಾಗಿದೆ. 

Advertisement

ನೋಟು ಅಪನಗದೀಕರಣದ ವೇಳೆ ಲಕ್ಷಾಂತರ ರೂಪಾಯಿ ಹಣವನ್ನು ಬದಲಾವಣೆಯನ್ನು ಅಕ್ರಮವಾಗಿ ಮಾಡಿಕೊಂಡಿರುವ ಆರೋಪದಲ್ಲಿ  ಈ ದಾಳಿ ನಡೆದಿದೆ ಎನ್ನಲಾಗಿದೆ. 

ಗುರುವಾರ ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್‌ ಅವರು ಸಹೋದರ ಸುರೇಶ್‌ ಜೊತೆ ತುರ್ತು ಸುದ್ದಿಗೋಷ್ಠಿ ನಡೆಸಿ ದಾಳಿ ನಡೆಯುವ ಬಗ್ಗೆ ನಮಗೆ ಮಾಹಿತಿ ದೊರಕಿದೆ, ಇದಕ್ಕೆ ನಾವು ಜಗ್ಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next