Advertisement
ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣದ ಸಂಬಂಧ ರೋಶನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ರವಿವಾರ ಬಂಧಿಸಿದ್ದರು. ಇಂದು ಬೆಳಿಗ್ಗೆ ಸಿಬಿಐ ಅಧಿಕಾರಿಗಳ ತಂಡ ಬೆಂಗಳೂರಿನ ಪುಲಕೇಶಿ ನಗರದ ಕೋಲ್ಸ್ ಪಾರ್ಕ್ ನಲ್ಲಿರುವ ರೋಶನ್ ಬೇಗ್ ಮನೆಗೆ ದಾಳಿ ನಡೆಸಿದ್ದು ದಾಖಲೆ ಪತ್ರ ಪರಿಶೀಲನೆಯಲ್ಲಿ ತೊಡಗಿದೆ.
Related Articles
Advertisement
400 ಕೋಟಿ ರೂ. ಆರೋಪ
ಐಎಂಎ ಮುಖ್ಯಸ್ಥ ಮನ್ಸೂರ್ ಅಲಿ ಖಾನ್, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ. ಬಳಿಕ ಅಜ್ಞಾತ ಸ್ಥಳದಿಂದ ಆಡಿಯೋ ಮಾಡಿ ಹರಿಯಬಿಟ್ಟು, ತನ್ನ ಬಳಿಯಿಂದ ರೋಶನ್ ಬೇಗ್ 400 ಕೋಟಿ ರೂ. ಪಡೆದು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ಈ ಆರೋಪವನ್ನು ಬೇಗ್ ತಳ್ಳಿ ಹಾಕಿದ್ದರು. ಮನ್ಸೂರ್ ಖಾನ್ ತನ್ನ ಆಡಿಯೋದಲ್ಲಿ ಬೇಗ್ ಮಾತ್ರವಲ್ಲದೆ ಹಲವು ರಾಜಕೀಯ ನಾಯಕರು ಮತ್ತು ಅಧಿಕಾರಿಗಳಿಗೂ ಹಣ ನೀಡಿದ್ದಾಗಿ ಉಲ್ಲೇಖೀಸಿದ್ದರು.
ಎಸ್‌ಐಟಿ ವಿಚಾರಣೆ ಎದುರಿಸಿದ್ದ ಬೇಗ್!
ಐಎಂಎ ವಂಚನೆ ಕೇಸ್ ಬಗ್ಗೆ ಮೊದಲು ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ), ವಿಚಾರಣೆಗೆ ಹಾಜರಾಗುವಂತೆ ಬೇಗ್‌ಗೆ ನೋಟಿಸ್ ನೀಡಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಕಳೆದ ವರ್ಷ ಜು. 19ರಂದು ಎಸ್‌ಐಟಿಯು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಿತ್ತು.