Advertisement

Ex-Governor ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ದಾಳಿ

04:48 PM Feb 22, 2024 | Team Udayavani |

ಹೊಸದಿಲ್ಲಿ: ಗೋವಾದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ರವರ ಮನೆ ಮತ್ತು ಕಚೇರಿ ಮೇಲೆ ಗುರುವಾರ ಬೆಳಗ್ಗೆ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ಜಮ್ಮು ಮತ್ತು ಕಾಶ್ಮೀರದ ಕಿರು ಜಲವಿದ್ಯುತ್ ಯೋಜನೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಕಿಶ್ತ್ವಾರ್ ನಲ್ಲಿ ಈ ಯೋಜನೆಯ ವಲಯ ಕಡತವನ್ನು ಅನುಮೋದಿಸಲು 300 ಕೋಟಿ ರೂ. ಲಂಚ ಸ್ವೀಕರಿಸಿದ ಆರೋಪವಿದೆ.

Advertisement

ಜಮ್ಮು ಮತ್ತು ಕಾಶ್ಮೀರದ ಕಿರು ಹೈಡ್ರೋ ಎಲೆಕ್ಟ್ರಿಕ್ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಗುರುವಾರ ಬೆಳಗ್ಗೆ ದೆಹಲಿಯ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರ ನಿವಾಸ ಮತ್ತು ಕಚೇರಿಯಲ್ಲಿ ಶೋಧ ನಡೆಸಿತು. ಇದಲ್ಲದೇ ಜಮ್ಮು ಮತ್ತು ಕಾಶ್ಮೀರದ 30 ಸ್ಥಳಗಳಲ್ಲಿ ಕೇಂದ್ರ ಸಿಬಿಐ ದಾಳಿ ನಡೆಸಿದೆ. ಕಿಶ್ತ್ವಾರ್ ನ ಚೆನಾಬ್ ನದಿಯ ಉದ್ದೇಶಿತ ಕಿರು ಜಲವಿದ್ಯುತ್ ಯೋಜನೆಗೆ 2019 ರಲ್ಲಿ 2,200 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆಯನ್ನು ನೀಡಿದ್ದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.

”ಕಳೆದ 3-4 ದಿನಗಳಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದೆ. ಹೀಗಿದ್ದರೂ ಸರ್ಕಾರಿ ಸಂಸ್ಥೆಗಳ ಮೂಲಕ ನನ್ನ ಮನೆ ಮೇಲೆ ಸರ್ವಾಧಿಕಾರಿ ದಾಳಿ ನಡೆಸುತ್ತಿದ್ದಾರೆ.ನನ್ನ ಕಾರು ಚಾಲಕ ಮತ್ತು ಸಹಾಯಕರ ಮೇಲೂ ದಾಳಿ ನಡೆಸಿ ಕಿರುಕುಳ ನೀಡಲಾಗುತ್ತಿದೆ. ನಾನೊಬ್ಬ ರೈತನ ಮಗ, ಈ ದಾಳಿಗಳಿಗೆ ನಾನು ಹೆದರುವುದಿಲ್ಲ. ನಾನು ರೈತರೊಂದಿಗೆ ಇದ್ದೇನೆ” ಎಂದು ಎಕ್ಸ್ ಪೋಸ್ಟ್ ಮಾಡುವ ಮೂಲಕ ಮಲಿಕ್ ಸಿಬಿಐ ದಾಳಿ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.

ಮಲಿಕ್ ಅವರು 23 ಆಗಸ್ಟ್ 2018 ರಿಂದ 30 ಅಕ್ಟೋಬರ್ 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದರು. ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕಳೆದ ತಿಂಗಳು ಕೂಡ ಸಿಬಿಐ ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು 8 ಸ್ಥಳಗಳಲ್ಲಿ ದಾಳಿ ನಡೆಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next