ಶ್ರೀನಗರ: ಕೇಂದ್ರಾಡಳಿತ ಪ್ರದೇಶದಲ್ಲಿ ಹೈಡಲ್ ಯೋಜನೆಗೆ ಗುತ್ತಿಗೆ ನೀಡುವಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ದಾಳಿ ನಡೆಸಿದೆ.
ಗುರುವಾರ ಮುಂಜಾನೆ ಅಧಿಕಾರಿಗಳ ತಂಡ ಸತ್ಯಪಾಲ್ ಮಲಿಕ್ ನಿವಾಸ ಸೇರಿದಂತೆ ಅವರಿಗೆ ಸಂಬಂದಿಸಿದ ಸುಮಾರು ೩೦ ಕಡೆಗಳಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಶೋಧಿಸುತ್ತಿದೆ.
ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್‌ನ (ಎಚ್‌ಇಪಿ) ಸುಮಾರು 2,200 ಕೋಟಿ ಮೊತ್ತದ ಸಿವಿಲ್ ಕಾಮಗಾರಿಗಳನ್ನು ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2018 ರಿಂದ 2019 ರ ನಡುವೆ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿ ಸೇವೆ ಸಲ್ಲಿಸಿದ ಸತ್ಯ ಪಾಲ್ ಮಲಿಕ್, 624 ಮೆಗಾವ್ಯಾಟ್‌ಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ಲಂಚ ನೀಡಲಾಯಿತು ಎಂದು ಹೇಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಕಳೆದ ತಿಂಗಳು ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು ಎಂಟು ಸ್ಥಳಗಳಲ್ಲಿ ಶೋಧ ನಡೆಸಿತ್ತು. 21 ಲಕ್ಷಕ್ಕೂ ಅಧಿಕ ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ಆಸ್ತಿ ದಾಖಲೆಗಳು ಮತ್ತು ದೋಷಾರೋಪಣೆ ದಾಖಲೆಗಳನ್ನು ಸಿಬಿಐ ವಶಪಡಿಸಿಕೊಂಡಿದೆ.
ಇದನ್ನೂ ಓದಿ: Video: ಗೃಹಬಂಧನ ಭೀತಿ; ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದ ಜಗನ್ ಸಹೋದರಿ ವೈಎಸ್ ಶರ್ಮಿಳಾ