Advertisement

ಹಿರಿಯ ವಕೀಲೆ ಇಂದಿರಾ ಜೈಸಿಂಗ್‌ ಕಚೇರಿಗೆ ದಾಳಿ

01:43 AM Jul 12, 2019 | mahesh |

ನವದೆಹಲಿ: ಖ್ಯಾತ ನ್ಯಾಯವಾದಿ ಇಂದಿರಾ ಜೈಸಿಂಗ್‌ ನಿವಾಸ ಹಾಗೂ ಅವರ ಪತಿ ಆನಂದ್‌ ಗ್ರೋವರ್‌ ನೇತೃತ್ವದ ‘ಲಾಯರ್ಸ್‌ ಕಲೆಕ್ಟಿವ್‌’ ಎನ್‌ಜಿಒ ಕಚೇರಿಗಳಲ್ಲಿ ಸಿಬಿಐ ಗುರುವಾರ ಶೋಧ ನಡೆಸಿದೆ. ವಿದೇಶಿ ವಿನಿಮಯ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಬಿಐ ಹೇಳಿದೆ. ಮುಂಬೈ ಮತ್ತು ನವದೆಹಲಿಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

Advertisement

ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೈಸಿಂಗ್‌, ಮಾನವ ಹಕ್ಕುಗಳ ಪರ ಹೋರಾಟ ನಡೆಸಿದ್ದಕ್ಕೆ ಈ ದಾಳಿ ನಡೆಸಲಾಗಿದೆ. ತಮ್ಮ ಪತಿ ಆನಂದ ಗ್ರೋವರ್‌ ಅವರ ಹೋರಾಟದಿಂದ ಕ್ರುದ್ಧರಾದವರು ಇಂಥ ಕೃತ್ಯ ನಡೆಸಿದ್ದಾರೆ ಎಂದು ದೂರಿದ್ದಾರೆ.

2006-07 ಮತ್ತು 2014-15ನೇ ಸಾಲಿನಲ್ಲಿ 32.39 ಕೋಟಿ ರೂ. ವಿದೇಶಿ ದೇಣಿಗೆ ಪಡೆದ ಪ್ರಕರಣಕ್ಕೆ ಸಂಬಂಧಿಸಿಗ್ರೋವರ್‌ ಮತ್ತು ಎನ್‌ಜಿಒ ವಿರುದ್ಧ ಕೇಂದ್ರ ಗೃಹ ಸಚಿವಾಲಯ ನೀಡಿದ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

ಶೋಧ ಕಾರ್ಯಾಚರಣೆ ಬಗ್ಗೆ ಪ್ರತಿಪಕ್ಷಗಳ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಇದೊಂದು ಸ್ಪಷ್ಟವಾದ ಅಧಿಕಾರದ ದುರುಪಯೋಗ ಎಂದು ಕಾಂಗ್ರೆಸ್‌, ಟಿಎಂಸಿ, ಎಸ್‌ಪಿ, ಸಿಪಿಐ, ಸಿಪಿಎಂ ಸಂಸದರು ಸಹಿ ಮಾಡಿರುವ ಪತ್ರದಲ್ಲಿ ಆಕ್ಷೇಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next