Advertisement
ಕ್ಲೌಡ್ ಸ್ಟೋರೇಜ್ ಬಳಸಿ ಇಂಟರ್‌ನೆಟ್‌ನಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಡಿಯೋ-ವಿಡಿಯೋಗಳ ದಂಧೆ ನಡೆಸುತ್ತಿದ್ದ ಪೆಡ್ಲರ್‌ಗಳ ವಿರುದ್ಧ ಕಳೆದ ವರ್ಷ “ಆಪರೇಷನ್ ಕಾರ್ಬನ್’ ಎಂಬ ಕಾರ್ಯಾಚರಣೆ ನಡೆಸಲಾಗಿತ್ತು.
Related Articles
ಕರ್ನಾಟಕ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ದಿಲ್ಲಿ, ಉತ್ತರ ಪ್ರದೇಶ, ಬಿಹಾರ, ಝಾರ್ಖಂಡ್, ಛತ್ತೀಸ್‌ಗಡ, ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು ಸಹಿತ 20 ರಾಜ್ಯಗಳ 56 ಸ್ಥಳಗಳಲ್ಲಿ ಶನಿವಾರ ದಾಳಿ ನಡೆದಿದೆ. ಅಪ್ರಾಪ್ತ ವಯಸ್ಸಿನವರ ಲೈಂಗಿಕ ಚಟುವಟಿಕೆಗಳ ಆಡಿಯೋ ಮತ್ತು ವೀಡಿಯೋಗಳನ್ನು ಹಂಚಿಕೊಳ್ಳಲು ಪೆಡ್ಲರ್‌ಗಳು ಬಳಸುವ ಕ್ಲೌಡ್ ಸ್ಟೋರೇಜ್‌ಗಳನ್ನು ಗುರಿಯಾಗಿಸಿಕೊಂಡು ಸಿಬಿಐನ ಸೈಬರ್ ಅಪರಾಧ ಘಟಕ ಈ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement
ರಾಜ್ಯದ 4 ಜಿಲ್ಲೆಗಳಲ್ಲಿ ದಾಳಿಬೆಂಗಳೂರು: ಸಿಬಿಐ ಹಾಗೂ ಕೇಂದ್ರದ ಇತರೆ ತನಿಖಾ ಸಂಸ್ಥೆಗಳು ಶನಿವಾರ ಬೆಂಗಳೂರಿನ 4 ಕಡೆ, ರಾಮನಗರ, ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿದೆ. ಇತ್ತೀಚೆಗೆ ಮಕ್ಕಳಿಗೆ ಸಂಬಂ ಧಿಸಿ ಲೈಂಗಿಕ ಪ್ರಚೋದನೆ ಯ ವಿಡಿಯೋಗಳನ್ನು ಕೆಲವರು ಡೌನ್‌ಲೋಡ್ ಮಾಡಿಕೊಂಡು ವೀಕ್ಷಣೆ ಮತ್ತು ಅವುಗಳನ್ನು ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಾಗಿಸುವ ಕುರಿತು ತನಿಖಾ ಸಂಸ್ಥೆಗಳು ನಿಗಾ ವಹಿಸಿದ್ದವು. ಈ ಕುರಿತು ಆಗಾಗ್ಗೆ ರಾಜ್ಯದ ಸಿಐಡಿ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದು, ಈ ಕುರಿತು ಡೌನ್‌ಲೋಡ್ ಅಥವಾ ಅಪ್‌ಲೋಡ್ ಮಾಡಿದ ವ್ಯಕ್ತಿ ವಾಸವಾಗಿರುವ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ (ಟಿಪ್‌ಲೈನ್) ಪ್ರಕರಣಗಳು ದಾಖಲಾಗುತ್ತಿವೆ. ಈ ಬೆನ್ನಲ್ಲೇ ದಾಳಿ ನಡೆಸಲಾಗಿದೆ ಎನ್ನಲಾಗಿದೆ.