ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆಯ ಮೇಲೆ ನಡೆದ ಸಿಬಿಐ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕುಟುಂಬದ ಭ್ರಷ್ಟಾಚಾರವನ್ನು ಮರೆಮಾಚಲು ಇಂತಹ ದಾಳಿ ಮಾಡ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂ ಕುಟುಂಬದ ಭ್ರಷ್ಟಾಚಾರದ ಬಗ್ಗೆ ಸಿಬಿಐ, ಐಟಿ ಯಾಕೆ ಪ್ರಕರಣ ದಾಖಲಿಸಿಲ್ಲ. ಸುಮೋಟು ಅಡಿ ದಾಖಲಿಸಿ ತನಿಖೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ನಾವು ಇದನ್ನೇ ಮುಂದಿಟ್ಟುಕೊಂಡು ಜನರ ಬಳಿ ಹೋಗುತ್ತೇವೆ. ಸೋಮವಾರ ಏನಾಗಿದೆ ಎಂದು ರಾಜ್ಯದ ಜನ ನೋಡಿದ್ದಾರೆ. ಬಿಜೆಪಿಯವರು ಯಾವ ಹಗರಣ ಮಾಡಿದರೂ ಏನು ಆಗಲ್ಲ ಎಂದರು.
ಇದನ್ನೂ ಓದಿ:ನನ್ನ ಸ್ಟಾಫ್ ಗೆ ಹಲ್ಲೆ ಮಾಡಿದ್ದಾರೆ: ಸಿಬಿಐ ಅಧಿಕಾರಿಗಳ ಮೇಲೆ ಡಿಕೆಶಿ ಗಂಭೀರ ಆರೋಪ
ಚುನಾವಣೆ ಹತ್ತಿರಬಂದಾಗ ಇಂತಹ ದಾಳಿಗಳು ನಡೆಯುತ್ತಲೇ ಇದೆ. ವಿಪಕ್ಷಗಳ ಎಲ್ಲಿ ಪ್ರಶ್ನೆ ಕೇಳುತ್ತಾರೆ ಅಲ್ಲಿ ದಾಳಿ ನಡೆಯುತ್ತದೆ. ರಾಜ್ಯದಲ್ಲಿ ಡಿಕೆಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷರಾದ ನಂತರ ಇದು ಹೆಚ್ಚಾಗಿದೆ ಎಂದರು.