Advertisement

ಮತ್ತೊಂದು 7000 ಕೋಟಿ ಬ್ಯಾಂಕ್ ವಂಚನೆ ಕೇಸ್; ಕರ್ನಾಟಕ ಸೇರಿದಂತೆ 169 ಸ್ಥಳಗಳಲ್ಲಿ CBI ಶೋಧ

09:50 AM Nov 06, 2019 | Team Udayavani |

ನವದೆಹಲಿ:ಏಳು ಸಾವಿರ ಕೋಟಿ ರೂಪಾಯಿಗಳ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ದೇಶಾದ್ಯಂತ ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್ ಸೇರಿದಂತೆ 169 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

Advertisement

ಸಿಬಿಐ ಹಿರಿಯ ಅಧಿಕಾರಿಗಳ ಮಾಹಿತಿ ಪ್ರಕಾರ, ಬ್ಯಾಂಕ್ ವಂಚನೆ ಪ್ರಕರಣ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ, ಚಂಡೀಗಢ್, ದೆಹಲಿ, ಗುಜರಾತ್, ಹರ್ಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು, ತೆಲಂಗಾಣ, ಉತ್ತರಪ್ರದೇಶ, ಉತ್ತರಾಖಂಡ್, ದಾದ್ರಾ ಮತ್ತು ನಗರ್ ಹವೇಲಿ ಸೇರಿದಂತೆ 169 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿರುವುದಾಗಿ ತಿಳಿಸಿದೆ.

7000 ಕೋಟಿ ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಕೇಸುಗಳು ದಾಖಲಾಗಿರುವುದಾಗಿ ಸಿಬಿಐ ಹೇಳಿದೆ. ಆದರೆ ಸಿಬಿಐ ಅಧಿಕಾರಿಗಳು ಬ್ಯಾಂಕ್ ಹೆಸರಾಗಲಿ ಅಥವಾ ಆರೋಪಿಗಳ ಹೆಸರನ್ನು ಬಹಿರಂಗಪಡಿಸಿಲ್ಲ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next