Advertisement

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

10:18 PM May 01, 2024 | Team Udayavani |

ಇಂಫಾಲ್‌: ಮಣಿಪುರದ ಇಬ್ಬರು ಬುಡಕಟ್ಟು ಮಹಿಳೆಯರ ಬೆತ್ತಲೆ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಪೊಲೀಸರೇ ಕುಮ್ಮಕ್ಕು ನೀಡಿದ್ದಾರೆ. ಹೀಗೆಂದು ಸಿಬಿಐ ತನ್ನ ಆರೋಪಪಟ್ಟಿಯಲ್ಲಿ ಉಲ್ಲೇಖೀಸಿದೆ.

Advertisement

2023ರ ಮೇ 4ರಂದು ಈ ಅಮಾನವೀಯ ಕೃತ್ಯ ನಡೆದಿದ್ದು, ಘಟನೆಯ ವೇಳೆ ಸ್ಥಳದಲ್ಲಿದ್ದ ಪೊಲೀಸರೇ ಗಲಭೆಕೋರರಿಗೆ ಸಹಕಾರ ನೀಡಿದ್ದಾರೆ.

ಗಲಭೆಕೋರರ ದಾಳಿಯಿಂದ ಭೀತರಾದ ಸಂತ್ರಸ್ತರು, ಸ್ಥಳದಲ್ಲಿದ್ದ ಪೊಲೀಸರ ಸಹಾಯ ಯಾಚಿಸಿ, ಪೊಲೀಸರ ಜೀಪಿನಲ್ಲಿ ಕುಳಿತುಕೊಂಡಿದ್ದಾರೆ. ಈ ವೇಳೆ ತಮ್ಮ ಬಳಿ ಕೀ ಇಲ್ಲವೆಂದು ಪೊಲೀಸರು ನಾಟಕ ಆಡಿದ್ದು, ಗಲಭೆಕೋರರಿಗೆ ಕುಮ್ಮಕ್ಕು ನೀಡಿದ್ದಾರೆಂದು ಚಾರ್ಜ್‌ಶೀಟ್‌ನಲ್ಲಿ ಆಪಾದಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next