ನವ ದೆಹಲಿ: “ಪರ್ಯಾಯ ಉತ್ತೀರ್ಣ ಸೂತ್ರ’ದ ಪ್ರಕಾರ ನೀಡಿದ ಅಂಕಗಳು ತೃಪ್ತಿ ತರದಿದ್ದರೆ, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಿಬಿಎಸ್‌ಇ ಆಗಸ್ಟ್‌ನಲ್ಲಿ ಪರೀಕ್ಷೆಗಳನ್ನು ಆಯೋಜಿಸಲಿದೆ.
ಅಂಕಗಳಿಂದ ತೃಪ್ತಿಯಾಗದ ವಿದ್ಯಾರ್ಥಿಗಳು ಆಗ ಪರೀಕ್ಷೆ ಬರೆಯಬಹುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.
ಶುಕ್ರವಾರ ಸಾಮಾಜಿಕ ಜಾಲತಾಣಗಳ ಮೂಲಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ವೇಳೆ ಅವರು ಈ ವಿಚಾರ ತಿಳಿಸಿದ್ದಾರೆ.
ಪ್ರಸ್ತುತ 10, 11 ಮತ್ತು 12ನೇ ತರಗತಿ ಅಂಕಗಳನ್ನು ಆಧರಿಸಿ ಅಂಕ ನೀಡಲು ನಿರ್ಧರಿಸಲಾಗಿದೆ ಎಂದರು. ಜೆಇಇ, ನೀಟ್‌ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಅವರು ಉತ್ತರಿಸಿಲ್ಲ.
ಇದನ್ನೂ ಓದಿ :ಬೌದ್ಧಿಕ ಹಕ್ಕು ಕಾಯ್ದೆಗಳ ಉಲ್ಲಂಘನೆ ಆರೋಪ : ಪ್ರಸಾದ್ ಟ್ವಿಟರ್ ಖಾತೆ ತಾತ್ಕಾಲಿಕ ಸ್ಥಗಿತ