Advertisement

ಸಿಬಿಎಸ್ ಇ ಹತ್ತನೇ ತರಗತಿ ಫಲಿತಾಂಶ ಪ್ರಕಟ: 91.46 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

03:45 PM Jul 15, 2020 | keerthan |

ಹೊಸದಿಲ್ಲಿ: ಸಿಬಿಎಸ್ಇ ಯ ಹತ್ತನೇ ತರಗತಿಯ ಅಂತಿಮ ವರ್ಷದ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಶೇಕಡಾ 91.46 ರಷ್ಟು ವಿದ್ಯಾರ್ಥಿಗಳು ಈ ಬಾರಿಯ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

Advertisement

ಇಂದು ಮಧ್ಯಾಹ್ನ 12 ಗಂಟೆಗೆ ಸಿಬಿಎಸ್ಇ ಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ.

ದೇಶದಲ್ಲಿ ಈ ಬಾರಿ 18,73,015 ಸಿಬಿಎಸ್ ಇ ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಬರೆದಿದ್ದು, ಅದರಲ್ಲಿ 17,13,121 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 93.31ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ. 90.14 ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. ಒಟ್ಟು 41,804 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.

ಕಳೆದ ಬಾರಿಗೆ ಹೋಲಿಸಿದಲ್ಲಿ ಈ ಬಾರಿ ಒಟ್ಟಾರೆ ಫಲಿತಾಂಶದಲ್ಲಿ 0.36 ರಷ್ಟು ಹೆಚ್ಚಳವಾಗಿದೆ.

ಕೇಂದ್ರ ಸಚಿವ ಡಾ ರಮೇಶ್ ಪೋಕ್ರಿಯಾಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, ವಿದ್ಯಾರ್ಥಿಗಳೆ, ಪಾಲಕರೇ ಸಿಬಿಎಸ್ ಇ ಹತ್ತನೇ ತರಗತಿಯ ಫಲಿತಾಂಶ ಪ್ರಕಟವಾಗಿದೆ. ಇದೆಲ್ಲವನ್ನೂ ಸಾಧ್ಯವಾಗಿಸಿದ ನಿಮ್ಮೆಲ್ಲರಿಗೂ ಅಭಿನಂದನೆಗಳು. ವಿದ್ಯಾರ್ಥಿಗಳ ಆರೋಗ್ಯ ಮತ್ತು ಗುಣಮುಟ್ಟದ ಶಿಕ್ಷಣ ನಮ್ಮ ಆದ್ಯತೆ ಎಂದಿದ್ದಾರೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next