ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಶುಕ್ರವಾರ 10ನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಿಬಿಎಸ್ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.
ಈ ವರ್ಷದ ಜನವರಿ 2 14 ರ ನಡುವೆ 10 ಮತ್ತು 12 ನೇ ತರಗತಿಗಳಿಗೆ ಸಿಬಿಎಸ್ಇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿತ್ತು.
ಬಾಲಕಿಯರೇ ಮೇಲುಗೈ: 12ನೇ ತರಗತಿಯ ಫಲಿತಾಂಶದಂತೆ 10ನೇ ತರಗತಿಯ ಸಿಬಿಎಸ್‌ಇ ಫಲಿತಾಂಶದಲ್ಲೂ ಬಾಲಕಿಯರು ಮೇಲುಗೈ ಸಂಪಾದಿಸಿದ್ದಾರೆ. ಶೇ. 94.25ರಷ್ಟು ವಿದ್ಯಾರ್ಥಿನಿಯರು ಪಾಸ್ ಆಗಿದ್ದರೆ, ಶೇ.92.27ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ಗಳಾದ //cbse.nic.in ಮತ್ತು //cbse.gov.inನಲ್ಲಿ ಪೋಸ್ಟ್ ಮಾಡಲಾಗಿದೆ. ವಿದ್ಯಾರ್ಥಿಗಳು ಇಲ್ಲಿ ಫಲಿತಾಂಶಗವನ್ನು ನೋಡಬಹುದು.