Advertisement

ಇಂದು ಮಧ್ಯಾಹ್ನ 12 ಗಂಟೆಗೆ ಹೊರಬೀಳಲಿದೆ ಸಿಬಿಎಸ್ ಇ ಹತ್ತನೇ ತರಗತಿ ಫಲಿತಾಂಶ

02:14 PM Jul 15, 2020 | keerthan |

ಹೊಸದಿಲ್ಲಿ: ಸಿಬಿಎಸ್ ಐ ಯು ಇಂದು ಹತ್ತನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ಮಾಡಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಿಬಿಎಸ್ ಇ ಅಡಿ ಬರುವ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಿಡುಗಡೆಯಾಗಲಿದೆ.

Advertisement

cbse.nic.in, cbseresults.nic.in. ಮುಂತಾದ ವೆಬ್ ಸೈಟ್ ಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಫಲಿತಾಂಶ ಪಡೆಯಬಹುದಾಗಿದೆ.

ಕೇಂದ್ರ ಸಚಿವ ರಮೇಶ್ ಪೋಕ್ರಿಯಾಲ್ ಮಂಗಳವಾರ ಈ ಬಗ್ಗೆ ಟ್ವೀಟ್ ಮಾಡಿದ್ದು, ಜು.15ರಂದು ಫಲಿತಾಂಶ ಬಿಡುಗಡೆಯಾಗಲಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

12ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಯನ್ನು ಸಿಬಿಎಸ್ ಇ ಸೋಮವಾರ ಬಿಡುಗಡೆ ಮಾಡಿತ್ತು. ಶೇ. 88.78 ರಷ್ಟು ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next