Advertisement

10 ಮತ್ತು 12ನೇ ತರಗತಿ ಪರೀಕ್ಷೆ ಸುತ್ತೋಲೆ ಗೊಂದಲಕ್ಕೆ ಸಿಬಿಎಸ್‌ಇ ತೆರೆ

09:40 PM Apr 02, 2021 | Team Udayavani |

ನವದೆಹಲಿ: ಇದೇ ಮೇ ತಿಂಗಳಿನಲ್ಲಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10 ಮತ್ತು 12ನೇ ತರಗತಿ ಪರೀಕ್ಷೆಗಳಿಗಾಗಿ ಈಗಾಗಲೇ ಪ್ರಕಟಣೆ ಹೊರಡಿಸಲಾಗಿದೆ. ಆದರೆ, ಕಳೆದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಇದೇ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಿಬಿಎಸ್‌ಇ ಹೊರಡಿಸಿದ್ದ ಸುತ್ತೋಲೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದು ವಿದ್ಯಾರ್ಥಿಗಳನ್ನು ಗೊಂದಲಕ್ಕೀಡು ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಂಡಳಿ ಸ್ಪಷ್ಟನೆ ನೀಡಿದೆ.

Advertisement

ಕಳೆದ ವರ್ಷ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆಗಿನ ಪರಿಸ್ಥಿತಿಗೆ ತಕ್ಕಂತೆ ಪ್ರಕಟಣೆ ಹೊರಡಿಸಲಾಗಿತ್ತು. ಅದನ್ನು ಈಗ ಪರಿಗಣಿಸುವ ಅಗತ್ಯವಿಲ್ಲ. ಹೊಸ ಪ್ರಕಟಣೆಯನ್ನು ಮಾತ್ರ ಪರಿಗಣಿಸಬೇಕು ಎಂದು ಮಂಡಳಿ ತಿಳಿಸಿದೆ.

ಈ ಸ್ಪಷ್ಟನೆಯ ಜೊತೆಗೆ, 10, 12ನೇ ತರಗತಿಗಳ ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಗೊಂದಲಗಳನ್ನು ಬಗೆಹರಿಸುವ ಉದ್ದೇಶದಿಂದ ಇ-ಪರೀಕ್ಷಾ ಎಂಬ ವೆಬ್‌ಸೈಟ್‌ಗೆ ಸಿಬಿಎಸ್‌ಇ ಚಾಲನೆ ನೀಡಿದೆ.

ಇದನ್ನೂ ಓದಿ :ಮುಂಬೈನಲ್ಲಿ ಹೆಚ್ಚಿದ ಕೋವಿಡ್  : ಒಂದೇ ದಿನ 8,832 ಪ್ರಕರಣ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next