Advertisement

ಕೋವಿಡ್ ಎಫೆಕ್ಟ್: ಸಿಬಿಎಸ್ ಇ, ಐಸಿಎಸ್ ಇಯ 10 ಮತ್ತು 12ನೇ ತರಗತಿ ಪರೀಕ್ಷೆ ರದ್ದು

04:58 PM Jun 25, 2020 | Nagendra Trasi |

ನವದೆಹಲಿ:ಜುಲೈ 1ರಿಂದ 15ರವರೆಗೆ ನಡೆಸಲು ಉದ್ದೇಶಿಸಿದ್ದ ಸಿಬಿಎಸ್ ಇ 10ನೇ ತರಗತಿ ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

Advertisement

ಸಿಬಿಎಸ್ ಇಯ 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್ ಗೆ ತಿಳಿಸಿದರು. ಇದಕ್ಕೂ ಮುನ್ನ ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಸಿಬಿಎಸ್ ಇಯ ಹಾಗೂ ಐಸಿಎಸ್ ಇಯ 10ನೇ ಮತ್ತು 12ನೇ ತರಗತಿ ಪರೀಕ್ಷೆಯನ್ನು
ರದ್ದುಗೊಳಿಸುವಂತೆ ಹಲವು ರಾಜ್ಯಗಳು ಬೇಡಿಕೆ ಇಟ್ಟಿದ್ದವು ಎಂದು ವರದಿ ಹೇಳಿದೆ.

ದೇಶದಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿಯ ಬಗ್ಗೆ ಅರಿವಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಧಿಕಾರಿಗಳು ಕೂಡಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಜಸ್ಟೀಸ್ ಎಎಂ ಖಾನ್ ವಿಲ್ಕರ್ ನೇತೃತ್ವದ ಪೀಠಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಜೂನ್ 23ರಂದು ಮನವರಿಕೆ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next