Advertisement
10ನೇ ತರಗತಿ ಪರೀಕ್ಷೆಯಲ್ಲಿ 94.40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗಿಂತ ಶೇ.1.4 ಹೆಚ್ಚು ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. 64,908 ವಿದ್ಯಾರ್ಥಿಗಳು ಶೇ.95ಕ್ಕಿಂತ ಅಧಿಕ ಅಂಕ ಪಡೆದಿದ್ದರೆ, 2,36,993 ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಉತ್ತರ ಪ್ರದೇಶದ ನೋಯ್ಡಾದ ವಿದ್ಯಾರ್ಥಿಯಾಗಿರುವ ಮಾಯಾಂಕ್ 500ಕ್ಕೆ 500 ಅಂಕಗಳನ್ನು ಪಡೆದು ಟಾಪರ್ ಆಗಿದ್ದಾರೆ.
ಸಿಬಿಎಸ್‌ಸಿ 10ನೇ ತರಗತಿ ಫಲಿತಾಂಶದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾದ ಪ್ರದೇಶದಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ತಿರುವನಂತಪುರಂನಲ್ಲಿ ಶೇ.98.93 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಅದು ಮೊದಲನೇ ಸ್ಥಾನದಲ್ಲಿದೆ. ಬೆಂಗಳೂರಿನ ಶೇ.98.16 ವಿದ್ಯಾರ್ಥಿಗಳು ಸಿಬಿಎಸ್‌ಸಿ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.