Advertisement

ವದಂತಿಗೆ ಕಿವಿಗೊಡಬೇಡಿ: CBSE 12ನೇ ತರಗತಿ ಪರೀಕ್ಷೆ ರದ್ದು ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ

06:49 PM May 14, 2021 | Team Udayavani |

ನವದೆಹಲಿ: ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳು ರದ್ದಾಗುವ ಸಾಧ್ಯತೆ ಇದೆ ಎಂಬ ವರದಿಯನ್ನು ಸಿಬಿಎಸ್ ಇ ಶುಕ್ರವಾರ(ಮೇ 14) ತಳ್ಳಿಹಾಕಿದ್ದು, ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.

Advertisement

ಇದನ್ನೂ ಓದಿ:ಉತ್ತರಪ್ರದೇಶ: ಚಿತ್ರಕೂಟ್ ಜೈಲಿನೊಳಗೆ ಶೂಟೌಟ್, ಗ್ಯಾಂಗ್ ಸ್ಟರ್ ಕಾಲಾ ಸೇರಿ ಮೂವರ ಸಾವು

ಕೋವಿಡ್ 19 ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ಹಲವು ವಿದ್ಯಾರ್ಥಿಗಳು ಮತ್ತು ಪೋಷಕರು ಕೂಡಾ ಸಿಬಿಎಸ್ ಇ ಪರೀಕ್ಷೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರೂ ಕೂಡಾ ಮಂಡಳಿ ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿಸಿದೆ.

ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾದ ಕಾರಣ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ಬಹುತೇಕ ರದ್ದು ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಈ ವರದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಈ ವರ್ಷದ 12ನೇ ತರಗತಿ ಬೋರ್ಡ್ ಪರೀಕ್ಷೆಗೆ ಯಾರು ಅರ್ಹರು ಎಂಬ ಪ್ರಶ್ನೆ ವಿದ್ಯಾರ್ಥಿಗಳ ಮನಸ್ಸಲ್ಲಿ ಮೂಡಿತ್ತು.

ಈ ಗೊಂದಲಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಸಿಬಿಎಸ್ ಇ ಅಧಿಕೃತವಾಗಿ ಪರೀಕ್ಷೆಯನ್ನು ರದ್ದುಗೊಳಿಸಿಲ್ಲ ಎಂಬುದಾಗಿ ತಿಳಿಸಿದೆ. ಒಂದು ವೇಳೆ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗೆದುಕೊಂಡರು ಅದನ್ನು ಸಾರ್ವಜನಿಕವಾಗಿ ಅಧಿಕೃತವಾಗಿ ಘೋಷಿಸಲಾಗುವುದು ಎಂದು ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next