Advertisement

ಜುಲೈ1ರಿಂದ 15ರವರೆಗೆ ಸಿಬಿಎಸ್ ಇ ಬೋರ್ಡ್ ಪರೀಕ್ಷೆ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ

08:21 AM May 09, 2020 | Nagendra Trasi |

ನವದೆಹಲಿ:ಕೋವಿಡ್ 19 ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಮುಂದೂಡಲ್ಪಟ್ಟಿದ್ದ ಸಿಬಿಎಸ್ ಇ 10ನೇ ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಯ ಹೊಸ ದಿನಾಂಕವನ್ನು ಶುಕ್ರವಾರ ಘೋಷಿಸಿದೆ.

Advertisement

10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆ ಜುಲೈ1ರಿಂದ 15ರವರೆಗೆ ನಡೆಯಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

ಬೋರ್ಡ್ ಪರೀಕ್ಷೆಯ ಹೊಸ ದಿನಾಂಕಕ್ಕಾಗಿ ಎಲ್ಲಾ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದು, ಇದೀಗ ಹೊಸ ದಿನಾಂಕ ಘೋಷಿಸಲಾಗಿದೆ.ಕೋವಿಡ್ ವೈರಸ್ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next