Advertisement
ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟಿಗೆ ಪ್ರಾಧಿಕಾರವು ಏ.18ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿತ್ತು. ಸಿಇಟಿ ಬರೆದ ಎಲ್ಲ ಅಭ್ಯರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನವೂ ಪೂರ್ಣಗೊಂಡಿದೆ. ಆದರೆ, ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟವಾಗದೇ ಇರುವುದರಿಂದ ಸಿಇಟಿ ಫಲಿತಾಂಶವೂ ವಿಳಂಬವಾಗುತ್ತಿದೆ.
Related Articles
ಪಿಯು ಫಲಿತಾಂಶ ಬಂದು 20ಕ್ಕೂ ಹೆಚ್ಚು ದಿನ ಕಳೆದಿದೆ. ಲಕ್ಷಾಂತರ ವಿದ್ಯಾರ್ಥಿಗಳು ಸಿಇಟಿ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ. ಪಿಯು ನಂತರ ಬಿ.ಎ, ಬಿ.ಕಾಂ, ಬಿಬಿಎಂ, ಬಿಸಿಎ ಸೇರಿ ವಿವಿಧ ಪದವಿ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಿಲ್ಲ. ಆದರೆ, ಎಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟು ಪಡೆದು ಕಾಲೇಜಿಗೆ ಸೇರಿಕೊಳ್ಳಬೇಕಾದ ವಿದ್ಯಾರ್ಥಿಗಳಿಗೆ ಸಿಇಟಿ ಕಡ್ಡಾಯ. ಹೀಗಾಗಿ ಅಂತಹ ವಿದ್ಯಾರ್ಥಿಗಳು ಅನಿವಾರ್ಯವಾಗಿ ಫಲಿತಾಂಶಕ್ಕೆ ಕಾಯಲೇಬೇಕು.
Advertisement
ನೀಟ್ ಫಲಿತಾಂಶವೂ ಅಗತ್ಯ:ಸಿಇಟಿ ಬರೆದಿರುವ ಬಹುತೇಕ ವಿದ್ಯಾರ್ಥಿಗಳು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಬರೆದಿದ್ದಾರೆ. ಕೆಲ ವಿದ್ಯಾರ್ಥಿಗಳು ನೀಟ್ ಮಾತ್ರ ಬರೆದಿದ್ದಾರೆ. ಮತ್ತೆ ಕೆಲವರು ಸಿಇಟಿಯನ್ನೂ ಬರೆದಿದ್ದಾರೆ. ಎರಡೂ ಪರೀಕ್ಷೆ ಬರೆದವರ ಅನುಕೂಲಕ್ಕಾಗಿ ನೀಟ್ ಫಲಿತಾಂಶವನ್ನು ಗಮನದಲ್ಲಿಟ್ಟುಕೊಂಡು ಸಿಟಿಇ ಫಲಿತಾಂಶ ಪ್ರಕಟಿಸಬೇಕಾಗುತ್ತದೆ. ಅಭ್ಯರ್ಥಿಗಳಿಗೆ ಸೂಚನೆ:
ಸಿಬಿಎಸ್‌ಇ ಫಲಿತಾಂಶ ಪ್ರಕಟವಾದ ತಕ್ಷಣವೇ ಫಲಿತಾಂಶದ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಸಿಇಟಿ ಬರೆದಿರುವ ವಿದ್ಯಾರ್ಥಿಗಳಿಗೆ ಪ್ರಾಧಿಕಾರದಿಂದ ಸೂಚಿಸಲಾಗಿದೆ. ವಿದ್ಯಾರ್ಥಿಗಳು ಫಲಿತಾಂಶದ ಮಾಹಿತಿಯನ್ನು ಅಪ್‌ಲೋಡ್ ಮಾಡಿದ ನಂತರವೇ ಫಲಿತಾಂಶ ಪ್ರಕಟಿಸಲು ಸಾಧ್ಯ. ಇಲ್ಲವಾದರೆ, ಸಿಬಿಎಸ್‌ಇ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ವಿದ್ಯಾರ್ಥಿಗಳ ಫಲಿತಾಂಶ ಮಾತ್ರ ಹೊರಬೀಳಲಿದೆ. ಸಿಬಿಎಸ್‌ಇ ಫಲಿತಾಂಶ ಇನ್ನೂ ಹೊರಬೀಳದೆ ಇರುವುದರಿಂದ ತಕ್ಷಣ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಮಾಸಾಂತ್ಯದವರೆಗೂ ಕಾಯುತ್ತೇವೆ. ಅಷ್ಟರೊಳಗೆ ಸಿಬಿಎಸ್‌ಇ ಫಲಿತಾಂಶ ಪ್ರಕಟವಾಗದೆ ಇದ್ದರೆ ಜೂನ್ 1 ಅಥವಾ 2ಕ್ಕೆ ಸಿಇಟಿ ಫಲಿತಾಂಶ ಪ್ರಕಟಿಸುತ್ತೇವೆ.
– ಗಂಗಾಧರಯ್ಯ, ಆಡಳಿತಾಧಿಕಾರಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ – ರಾಜು ಖಾರ್ವಿ ಕೊಡೇರಿ