Advertisement

ರಾಜ್ಯಾದ್ಯಂತ ಡಯಲ್‌ 100, ಠಾಣೆಗಳಲ್ಲಿ ಸಿಸಿ ಕೆಮರಾ

12:58 AM Jun 23, 2017 | Team Udayavani |

ಬೆಂಗಳೂರು: ಪೊಲೀಸ್‌ ಇಲಾಖೆಯ ಡಯಲ್‌ 100 ಸೌಲಭ್ಯವನ್ನು 30 ಜಿಲ್ಲೆಗಳಿಗೆ ವಿಸ್ತರಿಸಲು ಮತ್ತು ಎಲ್ಲ ಪೊಲೀಸ್‌ ಠಾಣೆಗಳಲ್ಲಿ ಸಿಸಿ ಟಿವಿ ಕೆಮರಾ ಅಳವಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ರಾಜ್ಯಾದ್ಯಂತ ಡಯಲ್‌-100 ತುರ್ತು ಸ್ಪಂದನ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿ 30 ಜಿಲ್ಲೆಗಳಿಗೆ ವಿಸ್ತರಿಸಲು 13.73 ಕೋಟಿ ರೂ. ವೆಚ್ಚ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಪೈಕಿ 8.73 ಕೋಟಿ ರೂ. ರಾಷ್ಟ್ರೀಯ ತುರ್ತು ಸ್ಪಂದನಾ ನಿಧಿಯಿಂದ ಮತ್ತು ಉಳಿದ 5 ಕೋಟಿ ರೂ. ರಾಜ್ಯ ಸರಕಾರ ಭರಿಸಲಿದೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಸಂಪುಟ ಸಭೆಯ ವಿವರ ನೀಡಿದರು. ಅದೇ ರೀತಿ ಪೊಲೀಸ್‌ ಠಾಣೆಗಳಲ್ಲಿ ಪೊಲೀಸರು ತಮ್ಮಲ್ಲಿಗೆ ಬರುವವರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂಬ ವ್ಯಾಪಕ ದೂರಿನ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗಳನ್ನು ಇನ್ನಷ್ಟು ಪಾರದರ್ಶಕವಾಗಿ ರೂಪಿಸಲು ರಾಜ್ಯಾದ್ಯಂತ 774 ಪೊಲೀಸ್‌ ಠಾಣೆಗಳಲ್ಲಿ ಸಿಸಿ ಟಿವಿ ಕೆಮರಾ ಅಳವಡಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಒಟ್ಟು 14.52 ಕೋಟಿ ರೂ. ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next