Advertisement

ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ

03:00 PM Oct 07, 2018 | Team Udayavani |

ಭಾಲ್ಕಿ: ಅಪರಾಧ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಸಂಘ ಸಂಸ್ಥೆ ಹಾಗೂ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದು ಬೀದರ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಹೇಳಿದರು.

Advertisement

ಪಟ್ಟಣದ ಚನ್ನಬಸವಾಶ್ರಮ ಪರಿಸರದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ನಡೆದ ಸಾರ್ವಜನಿಕ ಸುರಕ್ಷಾ ಕ್ರಮ ಕುರಿತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಹೆಚ್ಚುತ್ತಿರುವ ಅಪರಾಧ, ಅತ್ಯಾಚಾರ, ಕೊಲೆ, ಸುಲಿಗೆ, ಕಳ್ಳತನದಂತಹ ಪ್ರಕರಣಗಳಿಗೆ ತಡೆ ಹಾಕಬೇಕಿದೆ. ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಸಾಕಷ್ಟು ಕ್ರಮ ಜರುಗಿಸುತ್ತಿದೆ. ಇದಕ್ಕೆ ಸಾರ್ವಜನಿಕರು ಕೈ ಜೊಡಿಸಬೇಕಿದೆ.

100ರಿಂದ 500ರ ವರೆಗೆ ಜನ ಸೇರುವ ಧಾರ್ಮಿಕ ಕೇಂದ್ರಗಳು, ಶಾಲಾ-ಕಾಲೇಜು, ಅಂಗಡಿ ಮುಗ್ಗಟ್ಟು, ಬ್ಯಾಂಕ್‌, ಕಚೇರಿ, ಆಸ್ಪತ್ರೆ, ಮೆಡಿಕಲ್‌, ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಚಿತ್ರಮಂದಿರ, ಮಾರುಕಟ್ಟೆ ಪ್ರದೇಶ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಕಡ್ಡಾಯವಾಗಿ ಗುಣಮಟ್ಟದ ಸಿಸಿ ಕ್ಯಾಮರಾ ಅಳವಡಿಸಬೇಕು. ಎಟಿಎಂ ಸೇರಿದಂತೆ ಪ್ರಮುಖ
ಮಾರುಕಟ್ಟೆ ಪ್ರದೇಶದಲ್ಲಿ ಸ್ಥಳೀಯ ವ್ಯಾಪಾರಸ್ಥರು ರಕ್ಷಣಾ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಬೇಕು. ಇದರಿಂದ ಹಂತಕರಿಗೆ ಕಡಿವಾಣ ಹಾಕಲು ಸಹಕಾರಿಯಾಗುತ್ತದೆ ಎಂದು ವಿವರಿಸಿದರು.

ವ್ಯಾಪಾರಸ್ಥರು, ಪ್ರಮುಖರು, ಸಿಸಿ ಕ್ಯಾಮರಾವನ್ನು ಕೇವಲ ಕಾಟಾಚಾರಕ್ಕೆ ಎಂಬಂತೆ ಅಳವಡಿಸಬಾರದು. ಅಂಗಡಿ ಮುಂಭಾಗದ ರಸ್ತೆ, ಅಂಗಡಿ ಒಳಗೆ ಗುಣಮಟ್ಟದಿಂದ ಕೂಡಿರುವ ಸಿಸಿ ಕ್ಯಾಮರಾಗಳಲ್ಲಿ ಕನಿಷ್ಟ 30 ದಿನದ ವರೆಗೆ ರಿರ್ಕಾಡಿಂಗ್‌ ಸಾಮಾರ್ಥ್ಯ ಇರುವಂಥ ಸಿಸಿ ಕ್ಯಾಮರಾ ಸಂಬಂಧ ಪಟ್ಟವರು ಜೋಡಣೆ ಮಾಡಿಕೊಳ್ಳಬೇಕು ಎಂದರು. ಪೊಲೀಸ್‌ ಇಲಾಖೆಯ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದರೆ 2ರಿಂದ 10 ಸಾವಿರದ ವರೆಗೆ ದಂಡ ಬೀಳಲಿದೆ. ಅದನ್ನು ಮೀರಿದರೆ ಸಂಬಂಧಿತ ಸಂಸ್ಥೆ, ಅಂಗಡಿ ಪರವಾನಗಿ ರದ್ದು ಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಿವೈಎಸ್ಪಿ ವೆಂಕನಗೌಡ ಪಾಟೀಲ, ನಗರ ಪೊಲೀಸ್‌ ಠಾಣೆಯ ಸಿಪಿಐ ಬಿ.ಅಮರೇಶ್‌, ಗ್ರಾಮೀಣ ಪೊಲೀಸ್‌ ಠಾಣೆಯ ಸಿಪಿಐ ಲಖನ ಸೇರಿದಂತೆ ನಾನಾ ಸಂಘ, ಸಂಸ್ಥೆಯ ಮುಖಂಡರು, ಪ್ರಮುಖರು, ವ್ಯಾಪಾರಸ್ಥರು, ತಾಲೂಕು ಅನುಷ್ಠಾನ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next