Advertisement

CC camera: ಕಸ ಎಸೆಯೋರ ಮೇಲೆ ನಿಗಾ: ಕರೆಂಟ್‌ ಕಂಬದಲ್ಲಿ ಕ್ಯಾಮೆರಾ!

11:24 AM Jul 10, 2024 | Team Udayavani |

ಬೆಂಗಳೂರು: ನಗರದಲ್ಲಿ ಎಲ್ಲೆಂದರಲ್ಲಿ ಕಸ ಹಾಕುವವರ ಮೇಲೆ ಕಣ್ಗಾವಲಿಡಲು ಮುಂದಾಗಿರುವ ಸರ್ಕಾರ, ಇದಕ್ಕಾಗಿ ವಿದ್ಯುತ್‌ ಕಂಬಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದೆ.

Advertisement

“ಒಂದೆಡೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಮತ್ತೂಂದೆಡೆ ಎಲ್ಲೆಂದರಲ್ಲಿ ಕಸ ಎಸೆಯುವವರ ಪ್ರಮಾಣವೂ ಹೆಚ್ಚಾಗಿದೆ. ರೋಗ ಹರಡುವಿಕೆಗೆ ಇದು ಕೂಡ ಕಾರಣವಾಗಲಿದೆ. ಆದ್ದರಿಂದ ಹೀಗೆ ಕಸ ಎಸೆಯುವವರ ಮೇಲೆ ಕಣ್ಗಾವಲಿಡಲಾಗುವುದು’ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಇದನ್ನು ತಪ್ಪಿಸಲು ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಎಲ್‌ಇಡಿ ವಿದ್ಯುತ್‌ ದೀಪದ ಕಂಬಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಲಾಗಿದೆ. ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸುವ ಬಗ್ಗೆಯೂ ಸೂಚನೆ ನೀಡಲಾಗಿದೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next