Advertisement

ಪಟ್ಟ ಭದ್ರರಿಂದ ರೈತರಿಗೆ ತಪ್ಪು ಮಾಹಿತಿ

02:34 PM Dec 26, 2020 | Adarsha |

ಗದಗ: ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಂಕಲ್ಪದೊಂದಿಗೆ ಕೇಂದ್ರ ಸರಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದಿವೆ. ಇದರಿಂದ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲ. ಆದರೆ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ರೈತರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದು, ಅದಕ್ಕೆ ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

Advertisement

ನಗರದ ಶ್ರೀನಿವಾಸ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ರೈತರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಉಭಯ ಕಾಯ್ದೆಗಳು ರೈತರ ಹಿತ ಕಾಪಾಡುತ್ತವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬಿ.ಎಸ್‌.ಯಡಿಯೂರಪ್ಪ ಅವರ ರಾಜ್ಯ ಸರಕಾರ ಯಾವತ್ತೂ ರೈತ ಪರ ನಿರ್ಧಾರಗಳನ್ನೇ ಕೈಗೊಳ್ಳುತ್ತವೆ. ಈ ಬಗ್ಗೆ ಯಾವುದೇ ಸಂಶಯ ಬೇಡ.

ರೈತರು ಬೆಳೆದ ಉತ್ಪನ್ನಗಳಿಗೆ ತಾವೇ ದರ ನಿಗದಿಪಡಿಸಬೇಕು ಎಂಬುದು ಈ ಕಾಯ್ದೆಗಳ ಆಶಯವಾಗಿದ್ದು, ರೈತರಿಗೆ ಕೊಟ್ಟ ವಚನಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ವಿಲೀನ ಚರ್ಚೆ ಬಾಲಿಶ, ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ: ದೇವೇಗೌಡ

Advertisement

ಬಿಜೆಪಿ ಜಿಲ್ಲಾ ಅಧ್ಯಕ್ಷ ಮೋಹನಮಾಳಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರದಲ್ಲಿನ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ರೈತರ ಪರವಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಇದರಿಂದ ಕಂಗಾಲಾದ ವಿರೋಧ ಪಕ್ಷಗಳು ರೈತ ವರ್ಗವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆಎಂದು ಆರೋಪಿಸಿದ ಅವರು, ರೈತರಲ್ಲಿ ಗೊಂದಲ ಮೂಡುಸುತ್ತಿರುವ ವಿರೋಧ ಪಕ್ಷಗಳ ಹುನ್ನಾರವನ್ನು ಬಿಜೆಪಿ ಕಾರ್ಯಕರ್ತರು ಬಯಲಿಗೆ ಎಳೆಯಲಿದ್ದಾರೆ ಎಂದರು.

ಇದಕ್ಕೂ ಮುನ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಪ್ರಯುಕ್ತ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ ಯೋಜನೆಯಡಿ 9 ಕೋಟಿ ರೈತ ಕುಟುಂಬಗಳಿಗೆ ತಲಾ 2 ಸಾವಿರ ರೂ. ಗಳನ್ನು ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದರು.

ವೇದಿಕೆ ಮೇಲೆ ಜಿಲ್ಲಾ ಸಹ ಪ್ರಭಾರಿಗಳಾದ ನಾರಾಯಣ ಜರತಾರಘರ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ ಗಣಾಚಾರಿ, ಹಿರಿಯರಾದ ಎಂ.ಎಸ್‌.ಕರೀಗೌಡ್ರ, ಶ್ರೀಪತಿ ಉಡುಪಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲತಾ ಮುತ್ತಿನಪೆಂಡಿಮಠ, ನಿರ್ಮಲಾ ಕೊಳ್ಳಿ ಹಾಗೂ ವಿವಿಧ ಮೋರ್ಚಾಗಳ ಪದಾಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next