Advertisement

ಬ್ಲಾಕ್‌ಮೇಲ್‌ ಆರೋಪಿ ಐದು ದಿನ ಸಿಸಿಬಿ ವಶಕ್ಕೆ

12:42 AM May 07, 2019 | Lakshmi GovindaRaj |

ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಬ್ಲಾಕ್‌ಮೇಲ್‌ ಮಾಡಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಫೋಕಸ್‌ ಟಿವಿ ಎಂಬ ಖಾಸಗಿ ಸುದ್ದಿ ವಾಹಿನಿ ಮುಖ್ಯಸ್ಥ ಹೇಮಂತ್‌ ಕುಮಾರ್‌ನನ್ನು ಸೋಮವಾರ ಒಂದನೇ ಎಸಿಎಂಎಂ ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿ ಆದೇಶಿಸಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಭಾನುವಾರ ಸಂಜೆ ಆರೋಪಿಯನ್ನು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಆರೋಪಿಯನ್ನು ಕೋರ್ಟ್‌ಗೆ ಹಾಜರು ಪಡಿಸಿದ ತನಿಖಾಧಿಕಾರಿಗಳು, ಇದೊಂದು ಗಂಭೀರ ಪ್ರಕರಣವಾಗಿದ್ದು, ಆರೋಪಿ ಬಳಿ ಇರುವ, ಶಾಸಕರಿಗೆ ಸೇರಿದ್ದು ಎನ್ನಲಾದ ಕೆಲ ವಿಡಿಯೋ ಹಾಗೂ ಆಡಿಯೋಗಳನ್ನು ಜಪ್ತಿ ಮಾಡಬೇಕಿದೆ.

ಅಲ್ಲದೆ, ತನ್ನ ವೈಯಕ್ತಿಕ ಲಾಭಕ್ಕಾಗಿ ಮುಖ್ಯಮಂತ್ರಿ ಅವರ ಕಚೇರಿಯ ಹೆಸರು ದುರ್ಬಳಕೆ ಮಾಡಿಕೊಂಡಿಕೊಂಡಿರುವುದು ಕಂಡು ಬಂದಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಏಳು ದಿನಗಳ ಕಾಲ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಆದರೆ, ವಿಚಾರಣೆ ನಡೆಸಿದ ಕೋರ್ಟ್‌ ಐದು ದಿನಗಳ ಕಾಲ ವಶಕ್ಕೆ ನೀಡಿ ಆದೇಶ ನೀಡಿದೆ.

ಪ್ರಕರಣದ ಹಿನ್ನೆಲೆ?: ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ಮತ್ತು ವಿಡಿಯೋ ತನ್ನ ಬಳಿ ಇರುವುದಾಗಿ ಹೇಳಿ, ಬೆದರಿಸಿದ್ದ ಆರೋಪಿ ಹೇಮಂತ್‌ ಕುಮಾರ್‌, 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಈ ಸಂಬಂಧ ಶಾಸಕರ ಚುನಾವಣಾ ಕರ್ತವ್ಯಗಳನ್ನು ನೋಡಿಕೊಳ್ಳುವ ಗಿರೀಶ್‌ ಭಾರಧ್ವಾಜ್‌, ಮೇ 2ರಂದು ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಗಂಭೀರ ಪ್ರಕರಣವಾದರಿಂದ ಸಿಸಿಬಿಗೆ ವರ್ಗಾಹಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next