Advertisement
ಸಂಜನಾ ಇಂದು ನ್ಯಾಯಾಲಯಕ್ಕೆಈ ಬೆನ್ನಲ್ಲೇ “ಡ್ರಗ್ಸ್’ ದಂಧೆ ಪ್ರಕರಣ ದಲ್ಲಿ ಸಿಲುಕಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ನ್ಯಾಯಾಂಗ ಬಂಧನದ ಅವಧಿ ಶುಕ್ರವಾರ ಮುಕ್ತಾಯವಾಗಲಿದ್ದು, ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಸಂಜನಾ ವಿರುದ್ಧದ ಪ್ರಕರಣ ವನ್ನು ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಲಿದೆ. ಸಂಜನಾ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದು, ಶುಕ್ರವಾರವೇ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಮತ್ತೂಂದೆಡೆ ಪ್ರಕರಣದ ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಳಾದ ಶಿವಪ್ರಕಾಶ್, ಆದಿತ್ಯ ಆಳ್ವ, ಶೇಖ್ ಫಾಜಿಲ್ ಬಂಧನಕ್ಕೆ ತೀವ್ರ ಶೋಧ ನಡೆಸುತ್ತಿದ್ದಾರೆ. ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡಗಳನ್ನು ಕೂಡ ರಚಿಸಲಾಗಿದೆ.
ಪ್ರಮುಖ ಆರೋಪಿ ವೀರೇನ್ ಖನ್ನಾ ನೀಡಿರುವ ಮಾಹಿತಿ ಆಧರಿಸಿ ಆರೋಪಿ ಆದಿತ್ಯ ಅಗರ್‌ವಾಲ್ ಎಂಬಾತನನ್ನು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.