Advertisement

Mangaluru CCB: ಮಾದಕ ವಸ್ತು ಹಾಗೂ ಪಿಸ್ತೂಲ್ ಹೊಂದಿದ ಕುಖ್ಯಾತ ಡ್ರಗ್ ಪೆಡ್ಲರ್ ಗಳ ಸೆರೆ

12:40 PM Jul 21, 2023 | Team Udayavani |

ಮಂಗಳೂರು: ನಗರದಾದ್ಯಂತ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

Advertisement

ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿರೂರು ಎಂಬಲ್ಲಿ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಂಟ್ವಾಳ ಪುದು ಗ್ರಾಮ ಮೂಲದ ಸದ್ಯ ಕೃಷ್ಣಾಪುರ 7ನೇ ಬ್ಲಾಕ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಮೊಹಮ್ಮದ್ ನಿಯಾಜ್ (28), ತಲಪಾಡಿ ಕೆ.ಸಿ.ರೋಡ್ ನಿವಾಸಿ ನಿಶಾದ್ (31) ಮತ್ತು ಪಟೇಲ್ ಕಣ್ಣೂರು ನಿವಾಸಿ ಮಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅವರಿಂದ ಒಟ್ಟು 180 ಗ್ರಾಂ ತೂಕದ 9 ಲಕ್ಷ ರೂ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರುಗಳು, 4 ಮೊಬೈಲ್ ಫೋನ್ ಗಳು, ಪಿಸ್ತೂಲ್-1, ಸಜೀವ ಗುಂಡು-1, ಡ್ರಾಗನ್ ಚೂರಿಗಳು-2, ಡಿಜಿಟಲ್ ತೂಕ ಮಾಪನ ಮತ್ತು  ರೂ. 22,050 ನಗದು ವಶಪಡಿಸಿಕೊಳ್ಳಲಾಗಿದೆ. ಅರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

ಇದನ್ನೂ ಓದಿ:ರಾಯಗಡದಲ್ಲಿ ಭೂಕುಸಿತ ಪ್ರಕರಣ: ಮೃತರ ಸಂಖ್ಯೆ 16ಕ್ಕೆ ಏರಿಕೆ, 119 ಮಂದಿಗೆ ಮುಂದುವರೆದ ಶೋಧ

ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಸ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಉರ್ವಾ, ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರತ ಎಎಸ್‌ಐ ಯವರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣ, ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿಯವರಿಗೆ ಹಲ್ಲೆ ನಡೆಸಿದ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಸನ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟ 2 ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ 2 ದರೋಡೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಕಂಕನಾಡಿ ನಗರ, ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಮಾದಕ ಸೇವನೆಗೆ ಸಂಬಂಧಪಟ್ಟ 2 ಪ್ರಕರಣಗಳು ಹೀಗೆ ಒಟ್ಟು 10 ಪ್ರಕರಣಗಳು ದಾಖಲಾಗಿರುತ್ತದೆ. ಈತನು ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ವಾರಂಟ್ ಜಾರಿಯಾಗಿರುತ್ತದೆ.

Advertisement

ಇನ್ನೋರ್ವ ಅರೋಪಿ ಮೊಹಮ್ಮದ್ ರಝೀನ್ ಎಂಬಾತನ ವಿರುದ್ಧ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣವೊಂದು ದಾಖಲಾಗಿರುತ್ತದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next