Advertisement

CCB: ನೆರೆ ರಾಜ್ಯದಿಂದ ಮಹಿಳೆಯರ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ 14 ಮಂದಿ ಸೆರೆ

02:19 PM Nov 01, 2023 | Team Udayavani |

ಬೆಂಗಳೂರು: ಮಾನವ ಕಳ್ಳ ಸಾಗಣೆ ಮೂಲಕ ಬಾಂಗ್ಲಾದೇಶ ಹಾಗೂ ನೆರೆ ರಾಜ್ಯಗಳಿಂದ ಮಹಿಳೆಯರಿಗೆ ಉದ್ಯೋಗ ಕೊಡಿಸುವುದಾಗಿ ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ 14 ಮಂದಿಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದು, 20 ಮಹಿಳೆಯರನ್ನು ರಕ್ಷಿಸಿದ್ದಾರೆ.

Advertisement

ಅ.1ರಿಂದ 30ರತನಕ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಬಾಗಲಗುಂಟೆ, ವರ್ತೂರು, ಕೆ.ಆರ್‌.ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಮಾನವ ಕಳ್ಳ ಸಾಗಣೆ ಮಾಡಿಕೊಂಡು ಬಂದು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳುತ್ತಿದ್ದ ಜಾಲ ಪತ್ತೆಯಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಬಾಂಗ್ಲಾದೇಶ ಮೂಲದ ನಾಲ್ವರು, ಪಶ್ಚಿಮ ಬಂಗಾಳದ 11, ಕರ್ನಾಟಕದ ಮೂವರು, ತೆಲಂಗಾಣ ಹಾಗೂ ಉತ್ತರಾಖಂಡ್‌ ಮೂಲದ ತಲಾ ಒಬ್ಬ ಮಹಿಳೆಯರನ್ನು ರಕ್ಷಿಸಲಾಗಿದೆ. ಬಂಧಿತರಿಂದ 4 ದ್ವಿಚಕ್ರ ವಾಹನ, 1 ಕಾರು, 40 ಮೊಬೈಲ್‌ಗ‌ಳು, 2 ಲ್ಯಾಪ್‌ಟಾಪ್‌ಗ್ಳು, 3 ವಿವಿಧ ಕಂಪನಿಯ ಸಿಮ್‌ ಕಾರ್ಡ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next