ಬೆಂಗಳೂರು: ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರಿಗೆ ದೀಪಾವಳಿ ಸಂದರ್ಭದಲ್ಲಿ ಭಾರೀ ಸಂಕಷ್ಟ ಎದುರಾಗಿದ್ದು, ಸಿಸಿಬಿ ಪೊಲೀಸರು ಅವರ ಬಂಧನಕ್ಕೆ ಸಿದ್ದತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ಜನಾರ್ದನ ರೆಡ್ಡಿ ನಾಪತ್ತೆಯಾಗಿದ್ದಾರೆ ಎಂದೂ ಹೇಳಲಾಗಿದೆ.
ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಕಾರ್ಯಾಚರಣೆಗಿಳಿದಿದ್ದು, ಜನಾರ್ದನ ರೆಡ್ಡಿ ಅವರ ಕೆಲ ಆಪ್ತರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ವರದಿಯಾಗಿದೆ.
ಜನಾರ್ದನ ರೆಡ್ಡಿ ಮತ್ತು ಆಪ್ತ ಡೀಲ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಲಿ ಖಾನ್ ಅವರಿಗಾಗಿ ಸದ್ಯ ಸಿಸಿಬಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಪಡೆಯಲು ಜನಾರ್ದನ ರೆಡ್ಡಿ ಹೈದರಾಬಾದ್ ಕೋರ್ಟ್ ಮೊರೆ ಹೋಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸದ್ಯ ಜನಾರ್ದನ ರೆಡ್ಡಿ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ ಎಂದು ಹೇಳಲಾಗಿದೆ.