Advertisement

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿವೇಕ್ ಒಬೆರಾಯ್ ಮನೆಗೆ ಸಿಸಿಬಿ ದಾಳಿ

04:07 PM Oct 15, 2020 | keerthan |

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ರ ಮುಂಬೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ.

Advertisement

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಆದಿತ್ಯ ಆಳ್ವ ತಲೆಮರೆಸಿಕೊಂಡಿದ್ದಾನೆ. ಬಾಲಿವುಡ್ ನ ವಿವೇಕ್ ಒಬೆರಾಯ್ ಮೈದುನನಾಗಿರುವ ಆದಿತ್ಯ ಆಳ್ವ ಸದ್ಯ ವಿವೇಕ್ ಒಬೆರಾಯ್ ಮನೆಯಲ್ಲಿ ಅಡಗಿರುವ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಇಂದು ದಾಳಿ ನಡೆಸಿದ್ದಾರೆ.

ಡ್ರಗ್ ಪ್ರಕರಣದಲ್ಲಿ ಆದಿತ್ಯ ಆಳ್ವ ಎ6 ಆರೋಪಿಯಾಗಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಹುಡುಕಾಟದಲ್ಲಿದ್ದಾರೆ. ಕೆಲವು ವಾರಗಳ ಹಿಂದೆ ಆದಿತ್ಯ ಆಳ್ವ ಬೆಂಗಳೂರು ನಿವಾಸಕ್ಕೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ:ಕಾಂಗ್ರೆಸ್‌ ಖಾಸಗಿ ಆಸ್ತಿಯಾಗಿಬಿಟ್ಟಿದೆ, ಮುಂದಿನ ದಿನಗಳಲ್ಲಿ ವಿಪಕ್ಷ ಸ್ಥಾನವೂ ಕಷ್ಟ:ಖುಷ್ಬೂ

Advertisement

ಆದಿತ್ಯ ಆಳ್ವ ಮಾಜಿ ಸಚಿವ ಜೀವರಾಜ್ ಆಳ್ವ ಮತ್ತು ನಂದಿನಿ ಆಳ್ವ ಪುತ್ರ. ಡ್ರಗ್ ಪ್ರಕರಣದ ಪ್ರಮುಖ ಆರೋಪಿಗಳಾದ ಶಿವಪ್ರಕಾಶ್ ಚೆಪ್ಪಿ ಮತ್ತು ಶೇಕ್ ಫಾಜಿಲ್ ಕೂಡಾ ತಲೆಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ನಟಿಯರಾದ ರಾಗಿಣಿ ಮತ್ತು ಸಂಜನಾ ಗಲ್ರಾಣಿ ಬಂಧನಕ್ಕೊಳಗಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next