Advertisement

ಡ್ರಗ್ಸ್ ನಂಟಿನಲ್ಲಿ ಮಾಜಿ ಡಾನ್ ಪುತ್ರ? ಮುತ್ತಪ್ಪ ರೈ ಮನೆಗೆ ಸಿಸಿಬಿ ದಾಳಿ

03:20 PM Oct 06, 2020 | keerthan |

ಬೆಂಗಳೂರು: ಇತ್ತೀಚೆಗೆ ನಿಧನರಾದ ಮಾಜಿ ಡಾನ್ ಮುತ್ತಪ್ಪ ರೈ ಅವರ ಮನೆಗೆ ಸಿಸಿಬಿ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿದ್ದಾರೆ.

Advertisement

ಮುತ್ತಪ್ಪ ರೈ ಅವರ ಸದಾಶಿವನಗರ ಮತ್ತು ಬಿಡದಿಯಲ್ಲಿರುವ ಎರಡೂ ಮನೆಗಳಿಗೆ ಏಕಕಾಲದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಿ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಸಿಸಿಬಿ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಇಂದು ಬೆಳಿಗ್ಗೆ ಎರಡೂ ಮನೆಗಳಿಗೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ:ಬೆಳ್ತಂಗಡಿ: ನಾಡಿನಿಂದ ನಾಪತ್ತೆಯಾಗಿದ್ದ ವೃದ್ಧ ಮೂರು ದಿನದ ಬಳಿಕ ಕಾಡಿನಲ್ಲಿ ಪತ್ತೆ!

ಡ್ರಗ್ ಜಾಲದ ಬೆನ್ನು ಬಿದ್ದಿರುವ ಸಿಸಿಬಿ ಪೊಲೀಸರು ದೊಡ್ಡ ದೊಡ್ಡ ಕುಳಗಳಿಗೆ ಬಲೆ ಬೀಸುತ್ತಿದ್ದಾರೆ. ಚಿತ್ರ ನಟಿಯರಾದ ರಾಗಿಣಿ ಮತ್ತು ಸಂಜನಾ ಈಗಾಗಲೇ ಜೈಲು ಸೇರಿದ್ದು, ತನಿಖೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next