Advertisement

ಸಿಸಿಬಿ ದಾಳಿ: ಅಕ್ರಮವಾಗಿ ಮಾರುತ್ತಿದ್ದ ಮದ್ಯ ವಶ

09:04 AM Apr 04, 2020 | keerthan |

ಬೆಂಗಳೂರು; ಕೇಂದ್ರ ಅಪರಾಧ ದಳದ ಪೊಲೀಸರು ಗುರುವಾರ ದಾಳಿ ನಡೆಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

Advertisement

ದೇಶಾದ್ಯಂತ ಲಾಕ್ ಡೌನ್ ಇರುವ ಹಿನ್ನಲೆ ಮದ್ಯ ಮಾರಾಟಕ್ಕೆ ನಿಷೇಧವಿದೆ. ವೈನ್ ಶಾಪ್ ಗಳು, ಪಬ್, ಬಾರ್ ಗಳನ್ನು ತೆರೆಯಲು ಅವಕಾಶವಿಲ್ಲ. ಆದರೆ ನಿಷೇಧದ ಹೊರತಾಗಿಯೂ ಆರೋಪಿಗಳು ಮದ್ಯ ಮಾರಾಟ ಮಾಡುತ್ತಿದ್ದರು.

ಆರೋಪಿಗಳು ಅಕ್ರಮವಾಗಿ ವಿದೇಶಿ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next