ಮಧ್ಯಪ್ರದೇಶ: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು ಹರಿದ ಪರಿಣಾಮ ಇಬ್ಬರು ಸಹೋದರಿಯರು ಗಂಭೀರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಸೋಮವಾರ(ಅ.28) ಸಂಭವಿಸಿದೆ.
ಘಟನೆಯಲ್ಲಿ ಇಬ್ಬರು ಸಹೋದರಿಯರು ಗಂಭೀರ ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಓರ್ವಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳಿಸುವಂತಿದೆ.
ಕಳೆದ ಸೋಮವಾರ ಸಂಜೆ ಸುಮಾರು ಐದು ಗಂಟೆಯ ಸುಮಾರಿಗೆ ಇಂದೋರ್ನ ಜೈಭವಾನಿ ನಗರದಲ್ಲಿ ಇಬ್ಬರು ಸಹೋದರಿಯರು ತನ್ನ ಮನೆಯ ಹೊರಭಾಗದಲ್ಲಿ ರಂಗೋಲಿ ಹಾಕುತ್ತಿದ್ದರು ಅಷ್ಟು ಹೊತ್ತಿಗೆ ಅದೇ ಮಾರ್ಗದಲ್ಲಿ ಯುವಕನೊಬ್ಬ ಕಾರು ಚಲಾಯಿಸಿಕೊಂಡು ಬಂದಿದ್ದಾನೆ ಈ ವೇಳೆ ರಸ್ತೆಯಲ್ಲಿದ್ದ ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮನೆಯ ಹೊರ ಭಾಗದಲ್ಲಿ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದು ಕಟ್ಟಡಕ್ಕೆ ಡಿಕ್ಕಿ ಹೊಡೆದು ನಿಂತಿದೆ.
ಘಟನೆ ವೇಳೆ ಚಾಲನೆ ಮಾಡುತ್ತಿದ್ದ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ, ಕೂಡಲೇ ಅಲ್ಲಿ ಸೇರಿದ ಜನ ಕಾರಿನಡಿ ಸಿಲುಕಿದ ಸಹೋದರಿಯರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಇಬ್ಬರಲ್ಲಿ ಓರ್ವಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿ ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Actor Darshan: ಬೇರೆ ಅವರನ್ನು ನಿಂದಿಸಬೇಡಿ.. ದರ್ಶನ್ ಅಭಿಮಾನಿಗಳಿಗೆ ʼಡಿ ಕಂಪನಿʼ ಮನವಿ