ಬೆಂಗಳೂರು: ವಿಜಯನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಕೃಷ್ಣಪ್ಪ ಬುಧವಾರ ಕೆಪಿ ಅಗ್ರಹಾರ ವಾರ್ಡ್‌ನಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.
ಪಕ್ಷದ ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಮುಖಂಡರ ಜತೆಗೂಡಿ ಪಾದಾಯತ್ರೆ ನಡೆಸಿದ ಅವರು, ಶಾಸಕನಾಗಿ ಜನಪರ ಕಾರ್ಯಗಳನ್ನು ಕೈಗೊಂಡಿದ್ದು ಮತ್ತೂಮ್ಮೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು. ವಸತಿ ಸಚಿವರಾಗಿ ಕ್ಷೇತ್ರದಲ್ಲಿ ಮನೆಗಳ ನಿರ್ಮಾಣ, ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಪ್ರತಿ ವಾರ್ಡ್‌ನಲ್ಲಿ ಶುದ್ಧ
ಕುಡಿಯುವ ನೀರು ಘಟಕ ನಿರ್ಮಾಣ ಮಾಡಲಾಗಿದೆ.’
34,464 ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ಸೇರಿ ಸರ್ಕಾರದ ಸವಲತ್ತು ಕಲ್ಪಿಸಲಾಗಿದೆ. ಬಡ ಕುಟುಂಬಗಳಿಗೆ ಅಗತ್ಯವಾದ ಸವಲತ್ತು ನೀಡಲಾಗಿದೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ ಭದ್ರತೆ ಹಾಗೂ ಸುರಕ್ಷತೆಗಾಗಿ 400 ಕಡೆ ಸಿಸಿ ಟಿವಿ ಅಳವಡಿಕೆ ಮಾಡಲಾಗಿದೆ. ಅಪರಾಧ ಪ್ರಕರಣ ತಡೆಗಟ್ಟುವಲ್ಲಿ ಇದು ಸಹಕಾರಿಯಾಗಿದೆ ಎಂದು ಹೇಳಿದರು.