ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಶ್ಲೀಲ ಸಿ.ಡಿ. ಬಹಿರಂಗ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕ್ಲೀನ್‌ಚಿಟ್ ನೀಡಿದೆ.
ಅಶ್ಲೀಲ ಸಿಡಿ ಪ್ರಕರಣದ ತನಿಖೆ ಮುಕ್ತಾಯಗೊಳಿಸಿರುವ ಎಸ್‌ಐಟಿ ಶುಕ್ರವಾರ ನಗರದ ಮೊದಲನೇ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಸಿದೆ.
ತಂಡದ ತನಿಖಾಧಿಕಾರಿ ಎಂ.ಸಿ. ಕವಿತಾ ಅವರು ಎಸ್‌ಐಟಿ ಸರಕಾರಿ ವಿಶೇಷ ಅಭಿಯೋಜಕ ಪಿ.ಪ್ರಸನ್ನಕುಮಾರ್ ಅವರ ಮೂಲಕ ಕೋರ್ಟ್‌ಗೆ ಸುಮಾರು 300 ಪುಟಗಳ ಅಂತಿಮ ವರದಿ ಸಲ್ಲಿಸಿದ್ದು, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಮಾಜಿ ಸಚಿವರ ವಿರುದ್ಧದ ಆರೋಪ ಸಾಬೀತಾಗಿಲ್ಲ ಎಂದು ಉಲ್ಲೇಖೀಸಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಫೆ. 21ರಂದು ಫರ್ಹಾನ್ ಅಖ್ತರ್- ಮಾಡೆಲ್ ಶಿಬಾನಿ ದಂಡೇಕರ್ ವಿವಾಹ
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ರಮೇಶ್ ಜಾರಕಿಹೊಳಿ ಹಾಗೂ ಸಂತ್ರಸ್ತೆಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿತ್ತು. ಅಲ್ಲದೆ, ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತೆಯಿಂದ ಸಾಕ್ಷÂ ಪಡೆಯಲಾಗಿತ್ತು. ಆದರೆ, ಉದ್ದೇಶಪೂರ್ವಕವಾಗಿಯೇ ಸಚಿವರ ವಿರುದ್ಧ ಕೆಲ ಸಾಕ್ಷ್ಯಗಳನ್ನು ಸೃಷ್ಟಿಸಲಾಗಿದೆ ಎಂದು ಹೇಳಲಾಗಿದೆ. ಜತೆಗೆ ವೈರಲ್ ಆಗಿರುವ ಸಿಡಿಯಲ್ಲಿರುವ ದೃಶ್ಯಗಳಲ್ಲಿ ಸಂತ್ರಸ್ತೆ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯದಂತಹ ಕೃತ್ಯ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ತನಿಖಾ ತಂಡ ಅಭಿಪ್ರಾಯಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಮತ್ತೂಂದೆಡೆ ಪ್ರಕರಣದಲ್ಲಿ ಎಸ್‌ಐಟಿ ಅಂತಿಮ ವರದಿ ಸಲ್ಲಿಸಿರುವ ಬೆನ್ನಲ್ಲೇ ಸಂತ್ರಸ್ತೆ ಅದನ್ನು ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.