ಶಿವಮೊಗ್ಗ: ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಷಡ್ಯಂತ್ರ ಇದೆ. ದುರುದ್ದೇಶ ಪೂರ್ವಕವಾಗಿ ಸಚಿವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಡಿಸಿಎಂ ಡಾ.ಅಶ್ವತ್ಥ ನಾರಾಯಣ್ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಘಟನೆ ಕುರಿತು ತನಿಖೆ ನಡೆದ ನಂತರವಷ್ಟೇ ನಿಜ ಹೊರಬರಲು ಸಾಧ್ಯ. ಹಾಗಾಗಿ ರಮೇಶ್ ಜಾರಕಿಹೊಳಿಯ ರಾಜೀನಾಮೆ ಪ್ರಶ್ನೆ ಉದ್ಭವಿಸದು. ಪ್ರಕರಣದ ಕುರಿತು ಪಕ್ಷದ ವರಿಷ್ಠರು ಗಮನ ಹರಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಸಿಡಿ ಪ್ರಕರಣದ ಮೂಲಕ ಜಾರಕಿಹೊಳಿಯನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಮೇಲ್ನೋಟಕ್ಕೆ ಇದು ಸತ್ಯಕ್ಕೆ ದೂರವಾದ ಘಟನೆ ಎಂದು ಅನಿಸುತ್ತಿದೆ. ಹಾಗಾಗಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಪ್ರಶ್ನೆ ಬಾರದು ಎಂದರು.
ಇದನ್ನೂ ಓದಿ: ಸಿ.ಡಿ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡ ಇದೆ: ಬಾಲಚಂದ್ರ ಜಾರಕಿಹೊಳಿ
ಉಪ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಲಿದೆ. ಮೀಸಲಾತಿ ವಿಷಯದಲ್ಲಿ ಸರ್ಕಾರ ಈಗಾಗಲೇ ಸಮಿತಿ ರಚಿಸಿದ್ದು ವರದಿ ಬಂದ ನಂತರ ಕ್ರಮ ಜರುಗಿಸಲಿದೆ. ಯಾವ ಯಾವ ಸಮುದಾಯದಕ್ಕೆ ಎಷ್ಟು ಪ್ರಮಾಣದಲ್ಲಿ ಮೀಸಲಾತಿ ನೀಡಬೇಕು ಎಂದು ತೀರ್ಮಾನಿಸಲಿದೆ. ಒಕ್ಕಲಿಗರೂ ಸೇರಿದಂತೆ ಎಲ್ಲ ಸಮುದಾಯದ ಹಿಂದುಳಿದವರಿಗೆ ಮೀಸಲಾತಿ ಸಿಗಬೇಕಿದೆ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ಆರ್ಡರ್ ಮಾಡಿದ್ದು ಐಪೋನ್ 12 ಮ್ಯಾಕ್ಸ್ ಪ್ರೋ: ಬಂದ ವಸ್ತುವನ್ನು ನೋಡಿ ಹೌಹಾರಿದ ಮಹಿಳೆ !