ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿರುವ ಎಲ್ಓಸಿ ರೇಖೆಯಲ್ಲಿ ಪಾಕಿಸ್ಥಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ. ಈ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತದ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಓ) ಒಬ್ಬರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ಥಾನ ಸೇನಾ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್ ನ ಫಾರ್ವರ್ಡ್ ಪೋಸ್ಟ್ ಗಳಿಗೆ ಗುಂಡು ಹಾರಿಸಿದೆ. ಪ್ರತ್ಯುತ್ತರವಾಗಿ ಭಾರತೀಯ ಸೇನೆಯೂ ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.
ಇದನ್ನೂ ಓದಿ:“ನೀಟ್ ಪರೀಕ್ಷೆ” ಬರೆಯಲು ಅನುಮತಿ ಕೇಳಿದ ಪುಲ್ವಾಮಾ ಉಗ್ರ ದಾಳಿಯ ಆರೋಪಿ
ಗುಂಡಿನ ದಾಳಿಯ ವೇಳೆಗೆ ಜೂನಿಯರ್ ಕಮಿಷನ್ಡ್ ಆಫೀಸರ್ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ನಂತರ ಮರಣ ಹೊಂದಿದರು ಎಂದು ರಕ್ಷಣಾ ಮೂಲಗಳು ತಿಳಿಸಿದೆ. ಇದೇ ವೇಳೆ ಪಾಕಿಸ್ಥಾನ ಸೇನೆಯಲ್ಲಿಯೂ ಸಾವು ನೋವುಗಳು ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ: ಅಪಾಯದ ಹೆದ್ದಾರಿ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ಭೀತಿ