ಮಂಗಳೂರು: ಕಳೆದು ಹೋದ ಮೊಬೈಲ್ ಪೋನ್‌ಗಳ ತ್ವರಿತ ಬ್ಲಾಕ್, ಪತ್ತೆಗಾಗಿ ರಾಜ್ಯ ಪೊಲೀಸ್ ಇಲಾಖೆ ಆರಂಭಿಸಿದ ಸಿಇಐಆರ್ ಪೋರ್ಟಲ್‌ನಲ್ಲಿ ನಮೂ ದಾಗಿರುವ ಮಾಹಿತಿಗಳಿಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಪೊಲೀಸರು ಕಳೆದ 10 ದಿನಗಳಲ್ಲಿ 110 ಮೊಬೈಲ್ ಪೋನ್‌ಗಳನ್ನು ಬ್ಲಾಕ್ ಮಾಡಿದ್ದಾರೆ. 15 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚಿ ಹಸ್ತಾಂತರಿಸಿದ್ದಾರೆ.
ದೂರು ದಾಖಲಿಸಿ
ಮೊಬೈಲ್ ಕಳೆದುಹೋದರೆ, ಕಳ ವಾದರೆ, ಸುಲಿಗೆಯಾದರೆ ತತ್ ಕ್ಷಣ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ಅನಂತರ ಮಾಹಿತಿಯನ್ನು CEIR ಪೋರ್ಟಲ್‌ನಲ್ಲಿ ನಮೂದಿಸ ಬೇಕು. ಇದರಿಂದ ಕಳೆದು ಹೋದ, ಕಳವಾದ, ಸುಲಿಗೆಯಾದ ಮೊಬೈಲ್ ಫೋನ್‌ಗಳನ್ನು ಬ್ಲಾಕ್ ಮಾಡಿ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತತ್‌ಕ್ಷಣ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಈ ನೂತನ ತಂತ್ರಜ್ಞಾನವನ್ನು ದ.ಕ. ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ| ವಿಕ್ರಂ ಅಮಟೆ ತಿಳಿಸಿದ್ದಾರೆ.