ಮಂಡ್ಯ: ಕೋವಿಡ್-19 ಇರುವುದರಿಂದ ಕಳೆದ ವರ್ಷದ ಎಲ್ಲಾ ರಾಷ್ಟ್ರೀಯ ಹಬ್ಬಗಳನ್ನು ಸರಳವಾಗಿ ಆಚರಿಸಲಾಗಿತ್ತು. ಆದರೆ ಈ ಬಾರಿಯ ಗಣರಾಜ್ಯೋತ್ಸವವನ್ನು ಸಾಮಾಜಿಕ ಅಂತರ ಕಾಪಾಡಿಕೊಂಡು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಕಚೇರಿಯಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ಮಾಡ ಬೇಕು ಎಂದು ಸೂಚಿಸಿದರು. ಗಣರಾಜ್ಯೋತ್ಸವ ಆಚರಣೆಯಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ಎನ್‌ಸಿಸಿ ಹಾಗೂ ಇತರೆ ಇಲಾಖೆಗಳ ಪರೇಡ್ ನಡೆಯಲಿದೆ.
ಇದನ್ನೂ ಓದಿ:ನೌಕರರ ಭವನಕ್ಕೆ ಜಮೀನು ಗುರುತಿಸಿ
ರಸ್ತೆ ಬದಿಯಲ್ಲಿನ ಅಂಗಡಿ, ವಾಣಿಜ್ಯ ಮಳಿಗೆ, ಚಿತ್ರಮಂದಿರಗಳು ತಳಿರು ತೋರಣಗಳಿಂದ ಅಲಂಕೃತವಾಗಿರಲು ಸಹಕರಿಸಬೇಕು. ಗಣರಾಜ್ಯೋ ತ್ಸವ ಆಚರಣೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳು ಪರೇಡ್‌ನಲ್ಲಿ ಭಾಗವಹಿಸಲಿವೆ ಎಂದರು. ಗಣರಾಜ್ಯೋತ್ಸವ ಅದ್ಧೂರಿ ಆಚರಣೆಯಲ್ಲಿ ವಿವಿಧ ಇಲಾಖೆಗಳ ಯಾವುದೇ ಅ ಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಗೈರು ಹಾಜರಾಗ ದಂತೆ ಸಕ್ರಿಯವಾಗಿ ಭಾಗವಹಿಸುವಂತೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ವಿ.ಆರ್. ಶೈಲಜಾ, ವಾರ್ತಾಧಿಕಾರಿ ಟಿ.ಕೆ.ಹರೀಶ್, ಕ್ರೀಡಾ ಧಿಕಾರಿ ಅನಿತಾ, ಉಪ ಪೊಲೀಸ್ ವರಿಷ್ಠಾ ಧಿಕಾರಿ ಧನಂಜಯ್, ಕಚೇರಿ ಸಹಾಯಕ ಸ್ವಾಮಿಗೌಡ್ರು, ನಗರಸಭೆ ಆಯುಕ್ತ ಎಸ್.ಲೋಕೇಶ್, ಜಿಪಂ ಉಪ ಕಾರ್ಯದರ್ಶಿ ಎನ್.ಡಿ.ಪ್ರಕಾಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.