Advertisement

ಮನೆಯಲ್ಲೇ ಬಸವ ಜಯಂತಿ ಆಚರಿಸಿ

04:51 PM Apr 23, 2020 | Suhan S |

ಬೆಳಗಾವಿ:  ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಈ ಬಾರಿಯ ಬಸವ ಜಯಂತಿ ಆಚರಣೆಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು ಎಂದು ಬೆಳಗಾವಿ ಜಿಲ್ಲಾ ವೀರಶೈವ ಮಹಾಸಭೆ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಮನವಿ ಮಾಡಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಸವ ಜಯಂತಿಯನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಕೋವಿಡ್ 19 ವೈರಸ್‌ದಿಂದಾಗಿ ಸಾರ್ವಜನಿಕವಾಗಿ ಆಚರಣೆ ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ. ವೈರಸ್‌ ಹಬ್ಬದಂತೆ ತಡೆಯುವ ಸಲುವಾಗಿ ಸರ್ಕಾರ ರೂಪಿಸಿರುವ ಎಲ್ಲ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಮನೆಗಳಲ್ಲಿಯೇ ಬಸವ ಜಯಂತಿ ಆಚರಿಸುವಂತೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next