Advertisement
ಈ ವೇಳೆ ಮಾತನಾಡಿದ ಯಶವಂತರಾವ್, ರಾಜ್ಯ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ104 ಸ್ಥಾನ ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಾಗಾಗಿಯೇ ರಾಜ್ಯಪಾಲ ವಜುಭಾಯ್ ವಾಲಾ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. 15 ದಿನದೊಳಗೆ ಬಹುಮತ ಸಾಬೀತುಪಡಿಸಲು ಸೂಚಿಸಿದ್ದಾರೆ. ಯಡಿಯೂರಪ್ಪನವರು ಬಹುಮತ ಸಾಬೀತುಪಡಿಸಲಿದ್ದು, 5 ವರ್ಷಗಳ ಕಾಲ ಆಡಳಿತ ನಡೆಸಲಿದ್ದಾರೆ ಎಂದರು.
ಕಾಂಗ್ರೆಸ್, ಜೆಡಿಎಸ್‌ನಿಂದ ಆಯ್ಕೆಯಾದ ಕೆಲ ಶಾಸಕರು ಬೆಂಬಲಿಸಲಿದ್ದಾರೆ. ಹಾಗಾಗಿ ಮುಂದಿನ 5 ವರ್ಷದಲ್ಲಿ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ನಮ್ಮ ಪಕ್ಷ ಶ್ರಮಿಸಲಿದೆ ಎಂದು ಅವರು ತಿಳಿಸಿದರು. ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಚ್.ಸಿ. ಜಯಮ್ಮ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಸಿ. ಶ್ರೀನಿವಾಸ್, ಮುಖಂಡರಾದ ಕೆ. ಹೇಮಂತಕುಮಾರ್, ಶಿವನಗೌಡ ಪಾಟೀಲ್, ರಮೇಶ್ ನಾಯ್ಕ, ಎಚ್.ಎನ್. ಶಿವಕುಮಾರ್, ಜಯಲಕ್ಷ್ಮಿ ಮಹೇಶ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.