Advertisement

Celebration: ಹೊಸ ವರ್ಷಾಚರಣೆಗೆ ಅಡ್ಡಿ ಇಲ್ಲ, ಕಾನೂನು ಉಲ್ಲಂಘಿಸುವಂತಿಲ್ಲ: ಡಿಕೆಶಿ

03:11 AM Dec 30, 2024 | Team Udayavani |

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿನ ಕ್ರಮ ಕಟ್ಟಿಟ್ಟ ಬುತ್ತಿ. ಇದನ್ನು ಮನವಿಯಾಗಿಯಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Advertisement

ಮಾಧ್ಯಮಗಳಿಗೆ ರವಿವಾರ ಪ್ರತಿಕ್ರಿಯೆ ನೀಡಿ, ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕೆಮರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸ ವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯವನ್ನು ಕಾಪಾಡಬೇಕು ಎಂದು ತಿಳಿಸಿದರು.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 7 ದಿನ ಶೋಕಾಚಾರಣೆ ಘೋಷಣೆ ಮಾಡಿದ್ದು, ಕೇವಲ ಸರಕಾರಿ ಕಾರ್ಯಕ್ರಮಗಳನ್ನು ಮಾತ್ರ ತಡೆ ಹಿಡಿಯಲಾಗಿದೆ. ಅದರ ಹೊರತಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು ಎಂದರು.

ಹೊಸ ವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇರಬೇಕು. ಪಾಲಿಕೆ ಹಾಗೂ ಪೊಲೀಸರು ವ್ಯಾಪಾರಸ್ಥರಿಗೆ ಮಾರ್ಗಸೂಚಿ ನೀಡಲಿದ್ದಾರೆ. ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next