Advertisement

ಚಿಕ್ಕಬಳ್ಳಾಪುರ ಜಿಲ್ಲೆಗೆ 15ರ ಸಂಭ್ರಮ

03:23 PM Aug 24, 2021 | Team Udayavani |

ಚಿಕ್ಕಬಳ್ಳಾಪುರ: ಮಾಜಿ ಸಿಎಂ ಎಚ್‌.ಡಿ.ಕುಮಾರ ಸ್ವಾಮಿ ಅವರಿಂದ ಚಿಕ್ಕಬಳ್ಳಾಪುರ ಜಿಲ್ಲೆ ಉದಯವಾಗಿ 14 ವರ್ಷ ಕಳೆದರೂ ನಿರೀಕ್ಷಿತ
ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿಲ್ಲ, ಜಿಲ್ಲೆಯ ಜನ ಪ್ರತಿನಿಧಿಗಳ ಪಕ್ಷಾತೀತವಾಗಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಿ ಕೈಜೋಡಿ ಸಬೇಕೆಂದು ಜಿಲ್ಲಾ ಜೆಡಿಎಸ್‌ ಅಧ್ಯಕ್ಷಮುನೇಗೌಡ ಒತ್ತಾಯಿಸಿದರು.

Advertisement

ಚಿಕ್ಕಬಳ್ಳಾಪುರ ಜಿಲ್ಲೆ ಆಗಿ 15 ವರ್ಷಗಳ ಸಂಭ್ರಮದ ಅಂಗವಾಗಿ ಜಿಲ್ಲಾ ಜೆಡಿಎಸ್‌ ಪಕ್ಷದಿಂದ ನಗರದ ಕೋದಂಡಸ್ವಾಮಿ ದೇವಾಲಯದಲ್ಲಿ
ಅಭಿಷೇಕ ಮಾಡಿ, ಬಲಮರಿ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿಕೆ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು 14 ವರ್ಷಗಳ ಹಿಂದೆಯೇ ಚಿಕ್ಕಬಳ್ಳಾಪುರವನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಿ, ಅನುದಾನ
ಬಿಡುಗಡೆ ಮಾಡಿದ್ದರಿಂದ  ಕಚೇರಿಗಳು ಸ್ಥಾಪನೆಗೊಂಡಿವೆ. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಜಿಲ್ಲೆಯು ಅಭಿವೃದ್ಧಿ ಹೊಂದಿಲ್ಲ,ಈನಿಟ್ಟಿನಲ್ಲಿ
ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಿ ಬಾಕಿ ಉಳಿದುಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ:ತಮಿಳುನಾಡಿನಿಂದ ರಾಜ್ಯಕ್ಕೆ ಬಸ್‌ ಸಂಚಾರ ಆರಂಭ

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರೂಪಿಸಿದ್ದ ಯೋಜನೆ ಜಾರಿಗೊಳಿಸಿ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು, ಬರಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಗೆ ಎಚ್‌.ಎನ್‌.ವ್ಯಾಲಿಯ ತ್ಯಾಜ್ಯ ನೀರು ಎರಡು ಹಂತದಲ್ಲಿ ಶುದ್ಧೀಕರಿಸಿ ಅವೈಜ್ಞಾನಿವಾಗಿ ಹರಿಸಲಾಗುತ್ತಿದೆ. ಮೂರು ಹಂತದಲ್ಲಿ ಶುದ್ಧೀಕರಿಸಿ ಜಿಲ್ಲಾ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Advertisement

ಜಿಪಂ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಕೆ.ಸಿ.ರಾಜಕಾಂತ್‌, ಕಿಸಾನ್‌ಕೃಷ್ಣಪ್ಪ, ನಗರಸಭೆಯ ಉಪಾಧ್ಯಕ್ಷೆ ವೀಣಾರಾಮು, ನಗರಸಭೆಯ ಸದಸ್ಯ ಮಟ್ಟಮಪ್ಪ, ತಾಲೂಕು ಜೆಡಿಎಸ್‌ ಅಧ್ಯಕ್ಷ ಮುನಿರಾಜು, ಹಿರಿಯ ಮುಖಂಡರಾದ ಸಾಕ್‌, ಸೈಯದ್‌ ನಯಾಝ್, ಸೈಯದ್‌ ಅನ್ವರ್‌ , ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಬಂಡಲ್‌ ಶ್ರೀನಿವಾಸ್‌ ಇದ್ದರು.

ವರಿಷ್ಠರು ಒಪ್ಪಿದ್ರೆ ಸ್ಪರ್ಧೆ
ಚಿಕ್ಕಬಳ್ಳಾಪುರ ವಿಧಾನಸಭಾಕ್ಷೇತ್ರದ ಜನ ಬಯಸಿದರೆ ಪಕ್ಷದ ವರಿಷ್ಠರು ಅವಕಾಶ ಕಲ್ಪಿಸಿದರೆ ಮತ್ತೂಮ್ಮೆಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ, ಟಿಕೆಟ್‌ ವಿಚಾರದಲ್ಲಿ ಪಕ್ಷದ ಹೈಕಮಾಂಡ್‌ ನೀಡುವ ಆದೇಶ ಪಾಲಿಸುತ್ತೇವೆ ಎಂದು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next